ಚಾಮರಾಜನಗರ : ಲಂಚ ಪಡೆಯುವಾಗ ಸಿಕ್ಕಿಬಿದ್ದ ದ್ವಿತೀಯ ದರ್ಜೆ ಸಹಾಯಕ

ಚಾಮರಾಜನಗರ : ಸರ್ಕಾರಿ ನೌಕರೊಬ್ಬರು ಎಸಿಬಿ ಕಚೇರಿ ಸಮೀಪದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

ಹೌದು, ಕಂಟ್ರಾಕ್ಟರ್ ಒಬ್ಬರಿಗೆ ಲೈಸೆನ್ಸ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲೋಕೋಪಯೋಗಿ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಗೋವಿಂದಯ್ಯ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಚಾಮರಾಜನಗರ ತಾಲೂಕಿನ ಅಟ್ಟಗೂಳೀಪುರ ಗ್ರಾಮದ ವ್ಯಕ್ತಿಯೊಬ್ಬರಿಗೆ ಕ್ಲಾಸ್-4 ಕಾಂಟ್ರಾಕ್ಟರ್ ಕೊಡಲು 10,000 ರೂ ಲಂಚ ಪಡೆದು ಮತ್ತೆ 7.5 ಸಾವಿರ ರೂಗಳಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರು ಬಂದ ಹಿನ್ನೆಲೆ ಕಾರ್ಯಾಚರಣೆಯನ್ನು ಕೈಗೊಂಡ ಅಧಿಕಾರಿಗಳು ಮಂಗಳವಾರದಂದು ಎಸಿಬಿ ಡಿವೈಎಸ್ಪಿ ಸದಾನಂದ ತಿಪ್ಪಣ್ಣವರ್ ನೇತೃತ್ವದಲ್ಲಿ 7.5 ಸಾವಿರ ರೂಪಾಯಿ ಲಂಚ ಪಡೆಯುವಾಗ ಸಾಕ್ಷಿ ಸಮೇತ ಗೋವಿಂದಯ್ಯ ಅವರನ್ನು ಬಂಧಿಸಿ ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.