Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

ಹನೂರು : ಸಿ.ಸಿ.ರಸ್ತೆ & ಚರಂಡಿ ಕಾಮಗಾರಿಗೆ ಶಾಸಕ ಆರ್.ನರೇಂದ್ರ ಭೂಮಿ ಪೂಜೆ

ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮದಲ್ಲಿ ನೀರಾವರಿ ಇಲಾಖೆಯ ಎಸ್.ಇ.ಪಿ. ಯೋಜನೆಯ 10 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಆರ್.ನರೇಂದ್ರ ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ನೀರಾವರಿ ಇಲಾಖೆ ಯ ಎಸ್.ಇ. ಪಿ.ಯೋಜನೆಯಡಿ ದೊಡ್ಡಿಂದುವಾಡಿ ಗ್ರಾಮದಲ್ಲಿ 50 ಲಕ್ಷ ರೂ.ವೆಚ್ಚದ ರಸ್ತೆ ಮತ್ತು ಚರಂಡಿ ಕಾಮಗಾರಿ, ಹಾಗೂ ಮಣಗಳ್ಳಿ ಗ್ರಾಮದಲ್ಲಿ 10 ಸಿ.ಸಿ.ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಲಾಗುತ್ತಿದೆ. ಗುತ್ತಿಗೆದಾರರೂ, ಅಧಿಕಾರಿಗಳು ಗುಣಮಟ್ಟದ ಕಾಮಗಾರಿಗೆ ಒತ್ತನ್ನು ನೀಡಬೇಕು. ಯಜಮಾನರು ಮತ್ತು ಮುಖಂಡರು ರಸ್ತೆ ಒತ್ತುವರಿಯನ್ನು ಬಿಡಿಸಿ, ಗುತ್ತಿಗೆದಾರರಿಗೆ ಸಹಕರಿಸುವ ಮೂಲಕ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿಸಿಕೊಳ್ಳಿ ಎಂದು ತಿಳಿಸಿದರು.
ಡಾ. ಅಂಬೇಡ್ಕರ್ ಸಮುದಾಯ ಭವನ ವೀಕ್ಷಣೆ-: ಗ್ರಾಮದಲ್ಲಿ ನಿರ್ಮಾಣ ಹಂತಲ್ಲಿರುವ ಡಾ. ಬಿ. ಆರ್.ಅಂಬೇಡ್ಕರ್ ಸಮುದಾಯ ಭವನ ವೀಕ್ಷಿಸಿದ ಅವರು ಆದಷ್ಟು ಬೇಗಾ ಭವನ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿ ಎಂದು ಗ್ರಾಮಸ್ಥರಿಗೆ ತಿಳಿಸಿದರು.  ಈ ಸಂದರ್ಭದಲ್ಲಿ ಮಣಗಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸಿದ್ದರಾಜು, ಮಾಜಿ ಸದಸ್ಯ ಕೆಂಪಯ್ಯ, ಯಜಮಾನರಾದ ಮಹಾಲಿಂಗ, ಜೈಭೀಮ್ ಮಹಾ ನಾಯಕ ಸೇವಾ ಸಮಿತಿಯ ಅಧ್ಯಕ್ಷ ಮಹೇಶ್ ಕುಮಾರ್, ಕಾರ್ಯದರ್ಶಿ ಮಲ್ಲುಸ್ವಾಮಿ, ಖಜಾಂಚಿ ಪ್ರತಾಪ್, ಕಾಳಕೆಂಪಯ್ಯ, ಪುಟ್ಟಸ್ವಾಮಿ, ಪ್ರತಾಪ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!