Mysore
27
broken clouds

Social Media

ಭಾನುವಾರ, 25 ಜನವರಿ 2026
Light
Dark

ಮೃತ ಕುಲಕರ್ಣಿ ಮನೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

ಮೈಸೂರು : ಕೆಲವು ದಿನಗಳ ಹಿಂದೆಯಷ್ಟೇ ಕೊಲೆಯಾದ ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಕುಲಕರ್ಣಿ ಅವರ ಮನೆಗೆ ಇಂದು  ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ನಗರದ ಮೈಸೂರಿನ ಟಿಕೆ.ಲೇಔಟ್ ನಲ್ಲಿರುವ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಎಸ್‌.ಎ.ರಾಮ್‌ದಾಸ್  ಸೇರಿ ಹಲವು ಸ್ಥಳೀಯ ಮುಖಂರಡ ಸಾಥ್ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅರಗ ಜ್ಞಾನೇಂದ್ರ ಅವರು ಈ ಪ್ರಕರಣವನ್ನು ಅಪಘಾತ ಎಂದು ಬಿಂಬಿಸುವ ಯತ್ನ ನಡೆದಿತ್ತು. ಅದನ್ನ ಕೊಲೆ ಎಂದು ಕಂಡುಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇದಕ್ಕಾಗಿ ಪೊಲೀಸರನ್ನ ಅಭಿನಂಧಿಸುತ್ತೇನೆ. ಕೋರ್ಟ್‌ನಿಂದ ಮನೆ ತೆರವಿಗೆ ಆದೇಶ ಬಂದು ತೆರವು ಮಾಡುವುದಾದರೆ ಸೂಕ್ತ ಪೊಲೀಸ್ ರಕ್ಷಣೆ ನೀಡುತ್ತೇವೆ ಎಂದು ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!