ನಾಳೆ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ
ಮೈಸೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವ್ಯಾಪ್ತಿಯ ಮೈಸೂರು, ಮಂಡ್ಯ, ಚಾಮರಾಜ ನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ 116.77 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಸಿವಿಲ್ ಮತ್ತು ವಿದ್ಯುತ್ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ಜ.20 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಬುಧವಾರ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 2.93 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಕೆ.ಆರ್.ನಗರ ವಿಭಾಗ ಕಚೇರಿ, 2.50 ಕೋಟಿ ರೂ.ವೆಚ್ಚದ ಮದ್ದೂರು ವಿಭಾಗ ಕಚೇರಿ, 3.23 ಕೋಟಿ ರೂ. ವೆಚ್ಚದ ಮಡಿಕೇರಿ ವಿಭಾಗ ಕಚೇರಿ, 1.15 ಕೋಟಿ ರೂ. ವೆಚ್ಚದ ಮೈಸೂರಿನ ರಾಮಕೃಷ್ಣ ನಗರ ಉಪ ವಿಭಾಗ ಕಚೇರಿ, 1.09 ಕೋಟಿ ರೂ. ವೆಚ್ಚದ ಮಂಡ್ಯ ಜಿಲ್ಲೆಯ ಕೆರಗೋಡು ಉಪ ವಿಭಾಗ ಕಚೇರಿಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದರು.
4.61 ಕೋಟಿ ವೆಚ್ಚದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಚಾಮಲಪುರದಲ್ಲಿ ನಿರ್ಮಿಸಿರುವ 66/11ಕೆ.ವಿ. ವಿದ್ಯುತ್ ಉಪ ಕೇಂದ್ರಗಳನ್ನು ಉದ್ಘಾಟಿಸಲಾಗುವುದು.
ಶಾಖಾ ಕಚೇರಿಗಳ ಉದ್ಘಾಟನೆ (ಆವರಣದಲ್ಲಿರುವುದು ವೆಚ್ಚ)
ಮಂಡ್ಯ ಉಪ ವಿಭಾಗ ಕಚೇರಿ (87 ಲಕ್ಷ ರೂ.)
ಮೈಸೂರು ತಾಲ್ಲೂಕು ಜಯಪುರ (87 ಲಕ್ಷ ರೂ.)
ಹುಣಸೂರು ತಾಲ್ಲೂಕು ಗದ್ದಿಗೆ (63 ಲಕ್ಷ ರೂ.)
ಬಿ.ಮಟಕೆರೆ ಶಾಖಾ ಕಚೇರಿ (62 ಲಕ್ಷ ರೂ.)
ಹುಣಸೂರು ತಾಲ್ಲೂಕು ಹನಗೋಡು ( 63 ಲಕ್ಷ ರೂ.)
ಮೈಸೂರು ತಾಲ್ಲೂಕು ಆಲನಹಳ್ಳಿ (61 ಲಕ್ಷ ರೂ.)
ಮಂಡ್ಯ ಜಿಲ್ಲೆ ಬಸರಾಳು ( 40 ಲಕ್ಷ ರೂ.)
ಮಂಡ್ಯ ಜಿಲ್ಲೆ ಮಳವಳ್ಳಿ (40 ಲಕ್ಷ ರೂ.)
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…