ಮೈಸೂರು :ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬುಡಕಟ್ಟು ಸಮುದಾಯದವರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ನೃತ್ಯದ ಮೂಲಕ ಗಮನಸೆಳೆದರು.
ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆ.೨೬ರಂದು ಸೋಮವಾರ ಹೊಸದಿಲ್ಲಿಯ ಪಾಲಂ ವಿಮಾನ ನಿಲ್ದಾಣದಿಂದ ಮೈಸೂರಿಗೆ ನೇರವಾಗಿ ಆಗಮಿಸಲಿದ್ದಾರೆ. ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಾಂಸ್ಕೃತಿಕ ನಗರಿಗೆ ಮೊದಲ ಬಾರಿಗೆ ಆಗಮಿಸುತ್ತಿರುವ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಸ್ವಾಗತಿಸಲಿದ್ದಾರೆ.
೨೬ರಂದು ಬೆಳಿಗ್ಗೆ ೫.೫೦ಕ್ಕೆ ರಾಷ್ಟ್ರಪತಿ ಭವನದಿಂದ ಹೊರಟು ೬.೦೫ಕ್ಕೆ ಪಾಲಂ ವಿಮಾನ ನಿಲ್ದಾಣ ತಲುಪಲಿದ್ದಾರೆ. ೬.೧೫ಕ್ಕೆ ಹೊರಟು ೯ ಗಂಟಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ೯.೧೦ಕ್ಕೆ ವಿಮಾನ ನಿಲ್ದಾಣದಿಂದ ಹೊರಟು ೯.೩೦ಕ್ಕೆ ಚಾಮುಂಡೇಶ್ವರಿ ದೇವಸ್ಥಾನ ತಲುಪಲಿದ್ದಾರೆ. ನಂತರ, ೨೦ ನಿಮಿಷಗಳ ಕಾಲ ಚಾಮುಂಡೇಶ್ವರಿ ದೇವಾಲಯದಲ್ಲಿ ಇರಲ್ಲಿದ್ದಾರೆ. ೯.೫೦ಕ್ಕೆ ದೇವಸ್ಥಾನದಿಂದ ಹೊರಟು ೯.೫೫ಕ್ಕೆ ವೇದಿಕೆಯನ್ನೇರಲಿದ್ದಾರೆ. ೧೦ರಿಂದ ೧೦.೪೫ರ ವೇಳೆ ನಾಡಹಬ್ಬಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿಗಳು ೪೫ ನಿಮಿಷಗಳ ಕಾಲ ಸಮಾರಂಭದಲ್ಲಿ ಹಾಜರಿರುತ್ತಾರೆ.
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…