ಚಾಮರಾಜನಗರ : ತಾಲೂಕಿನ ಬದನಗುಪ್ಪೆ ಸಮೀಪದ ಮರಳಿಪುರ ಗ್ರಾಮದ ಜಮೀನಿನಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಅರಣ್ಯ ಇಲಾಖೆಯ ಸಿಬ್ಬಂದಿಗಳು ಮಾಹಿತಿ ಮೇರೆಗೆ ಇಂದು ರಾತ್ರಿ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ಗ್ರಾಮದ ನಂಜುಂಡಸ್ವಾಮಿ ಎಂಬುವರ ಜಮೀನಿನಲ್ಲಿ ಸಂಜೆ ಈ ಹೆಬ್ಬಾವು ಕಾಣಿಸಿಕೊಂಡಿದ್ದು, ಕೂಡಲೇ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಬಳಿಕ ಇಲಾಖೆಯ ಸಿಬ್ಬಂದಿಗಳು ಉರಗ ತಜ್ಞರೊಂದಿಗೆ ಸ್ಥಳಕ್ಕೆ ಬಂದು ಹೆಬ್ಬಾವನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ವೇಳೆ ಉರಗತಜ್ಞ ಅಶೋಕ್ ಅವರ ಕೈಗೆ ಹೆಬ್ಬಾವು ಕಚ್ಚಿ ಗಾಯಗೊಳಿಸಿದ್ದು ಸದ್ಯ ವೈದ್ಯರಿಂದ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಡಿ ಆರ್ ಎಫ್ ಚಂದ್ರಕುಮಾರ್ ನೀಡಿದ್ದಾರೆ.
ಹೆಬ್ಬಾವನ್ನು ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಗೌರಿಶಂಕರ್, ಮುಖಂಡರಾದ ರವಿ, ಬದನಗುಪ್ಪೆ ಮಂಜುನಾಥ್, ವೀರಭದ್ರ ಸ್ವಾಮಿ ಶಿಕ್ಷಕ ನಂಜುಂಡಸ್ವಾಮಿ ಇನ್ನಿತರರು ಉಪಸ್ಥಿತರಿದ್ದು ಕಾರ್ಯಾಚರಣೆಗೆ ಸಹಕರಿಸಿದ್ದಾರೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…