ಜಿಲ್ಲೆಗಳು

ಚಾ.ನಗರ :ಮಾ. 4ರಂದು ವಿಶೇಷಚೇತನ ಮಕ್ಕಳ ಜಾತ್ರೆ

ಚಾಮರಾಜನಗರ: ವಿಶೇಷಚೇತನ ಮಕ್ಕಳ ಜಾತ್ರೆಯನ್ನು ಮಾ 4 ರಂದು ಮಾರ್ಗದರ್ಶಿ ವಿಶೇಷಚೇತನರ ಸ್ವಯಂಸೇವಾ ಸಂಸ್ಥೆ ವತಿಯಿಂದ ನಗರದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸಂಯೋಜಕಿ ಲೀನಾಕುಮಾರಿ ತಿಳಿಸಿದರು.
ರಾಮಸಮುದ್ರ ಬಡಾವಣೆಯಲ್ಲಿರುವ ಸಂತ ಫ್ರಾನ್ಸಿಸ್ ಶಾಲೆ ಆವಣರದಲ್ಲಿ ಅಂದು ಬೆಳಿಗ್ಗೆ 9 ಗಂಟೆಗೆ ಜಾತ್ರೆ ನಡೆಯಲಿದ್ದು, ವಿಶೇಷಚೇತನ ಮಕ್ಕಳು  ಬಂದು ಹೋಗಲು ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ಕೋವಿಡ್ ಕಾರಣದಿಂದಾಗಿ 3 ವರ್ಷಗಳಿಂದ ಜಾತ್ರೆ ನಡೆಸಲಾಗಿರಲಿಲ್ಲ. ಈ ಬಾರಿ ಜಿಲ್ಲೆಯ ಐದೂ ತಾಲ್ಲೂಕಿನ 3 ರಿಂದ 16 ವರ್ಷದ ವಿಶೇಷಚೇತನ ಮಕ್ಕಳಿಗೆ ಜಾತ್ರೆ ಆಯೋಜಿಸಲಾಗಿದೆ. ಸುವಾರು 650ಕ್ಕೂ ಹೆಚ್ಚು ಮಕ್ಕಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.
ರೋಟರಿ ಸಿಲ್ಕ್ ಸಿಟಿ ಮಾಜಿ ಅಧ್ಯಕ್ಷ ಡಿ.ಎಸ್.ಗಿರೀಶ್ ಮಾತನಾಡಿ, ಜಾತ್ರೆಯಲ್ಲಿ ಭಾಗವಹಿಸುವ ಮಕ್ಕಳಿಗೆ ಆಟದ ಸಾಮಗ್ರಿ, ತಂಪು ಪಾನೀಯ, ಕಬ್ಬಿನ ಹಾಲು, ಕುಡಿಯುವ ನೀರು ಹಾಗೂ ತಿಂಡಿ-ತಿನಿಸುಗಳ ವ್ಯವಸ್ಥೆ ಮಾಡಲಾಗುವುದು ಎಂದರು.
ತಾಲ್ಲೂಕು ಸಂಯೋಜಕಿ ಕೋಮಲ, ಮಾರ್ಗದರ್ಶಕರಾದ ಕವಿತಾ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

7 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

7 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

7 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

7 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

8 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

8 hours ago