ಚಾಮರಾಜನಗರ: ಪರಿಶಿಷ್ಟ ಸಮುದಾಯದವರು ಹೆಚ್ಚಾಗಿರುವ ತಾಲ್ಲೂಕಿನ ಚಿಕ್ಕಹೊಳೆ, ಚಿಕ್ಕಹೊಳೆ ಚೆಕ್‌ಪೋಸ್ಟ್ ಗ್ರಾಮದ ಸಮೀಪ ಸ್ಮಶಾನ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬ ಒತ್ತುವರಿ ಮಾಡಿ ದಾರಿ ಬಂದ್ ಮಾಡಿದ್ದು ಇವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು.
ಸ್ಮಶಾನ ಭೂಮಿ ಎದುರು ಜಮಾಯಿಸಿ ಗ್ರಾಮಸ್ಥರು, ಮಹೇಶ್ ಎಂಬವರು ತಮ್ಮ ಜಮೀನಿನೊಂದಿಗೆ ಸ್ಮಶಾನ ಜಾಗವನ್ನು ಒತ್ತುವರಿ ಮಾಡಿಕೊಂಡು ಶವ ಹೂಳುವುದಕ್ಕೆ ತೊಂದರೆ ನೀಡುತ್ತಿದ್ದಾರೆ. ಇದನ್ನು ಪ್ರಶ್ನೆ ಮಾಡಲು ಹೋದ ಗ್ರಾಮಸ್ಥರನ್ನೇ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ಗ್ರಾಮಸ್ಥರು ದೂರಿದರು.
ಸುಮಾರು 70 ವರ್ಷಗಳಿಂದಲೂ ಎರಡೂ ಗ್ರಾಮದವರು ಸರ್ಕಾರಿ ಜಮೀನು 38ಪಿ1 ರಲ್ಲಿ 4ಎಕರೆ ಸರ್ಕಾರಿ ಭೂಮಿಯನ್ನು ಸ್ಮಶಾನವಾಗಿ ಬಳಕೆ ಮಾಡಿಕೊಳ್ಳುತ್ತಾ ಬಂದಿದ್ದೇವೆ. ಗ್ರಾಮ ಪಂಚಾಯಿತಿಯವರು ಇಲ್ಲಿ ಬೋರ್‌ವೆಲ್ ಕೊರೆದು ಪಂಪ್‌ಹೌಸ್ ನಿರ್ಮಾಣ ಮಾಡಿಕೊಟ್ಟಿದ್ದಾರೆ. ಈಗ ಏಕಾಏಕಿ ಒತ್ತುವರಿ ಮಾಡಿಕೊಂಡು ಸ್ಮಶಾನದ ದಾರಿಯನ್ನು ಬಂದ್ ಮಾಡಿದ್ದು ಕೂಡಲೇ ಇದನ್ನು ತೆರವುಗೊಳಿಸಬೇಕು. ಇಲ್ಲವಾದಲ್ಲಿ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸುವುದಾಗಿ ಎಂದಾಗಿ ಮಹದೇವಯ್ಯ ತಿಳಿಸಿದರು.
ಗ್ರಾಪಂ ಸದಸ್ಯರಾದ ಚೆಕ್‌ಪೋಸ್ಟ್ ಮೂರ್ತಿ, ಪ್ರಶಾಂತ್, ಸಿದ್ದಯ್ಯನಪುರದ ಮಂಜು, ಮುಖಂಡರಾದ ಕುಮಾರ್, ಅಂಗಡಿ ವಿನೋದ್, ಕಾರ್ತಿಕ್, ನಾಗೇಂದ್ರ, ರವಿ, ಸೆಲ್ವೆ ದೊರೆ, ನಾಗೇಗೌಡ, ಮೋಹನ್ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…
ದೇಮ ಎಂಬ ನೈತಿಕ ಕೈಮರ ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…
ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಅರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…