ಜಿಲ್ಲೆಗಳು

ಚಾ.ನಗರ : ಶವ ಹೂಳದಂತೆ ತಾಕೀತು; ಗ್ರಾಮಸ್ಥರಿಂದ ಪ್ರತಿಭಟನೆ

ಚಾಮರಾಜನಗರ: ಪರಿಶಿಷ್ಟ ಸಮುದಾಯದವರು ಹೆಚ್ಚಾಗಿರುವ ತಾಲ್ಲೂಕಿನ ಚಿಕ್ಕಹೊಳೆ, ಚಿಕ್ಕಹೊಳೆ ಚೆಕ್‌ಪೋಸ್ಟ್ ಗ್ರಾಮದ ಸಮೀಪ ಸ್ಮಶಾನ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬ ಒತ್ತುವರಿ ಮಾಡಿ ದಾರಿ ಬಂದ್ ಮಾಡಿದ್ದು ಇವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು.
ಸ್ಮಶಾನ ಭೂಮಿ ಎದುರು ಜಮಾಯಿಸಿ ಗ್ರಾಮಸ್ಥರು, ಮಹೇಶ್ ಎಂಬವರು ತಮ್ಮ ಜಮೀನಿನೊಂದಿಗೆ ಸ್ಮಶಾನ ಜಾಗವನ್ನು ಒತ್ತುವರಿ ಮಾಡಿಕೊಂಡು ಶವ ಹೂಳುವುದಕ್ಕೆ ತೊಂದರೆ ನೀಡುತ್ತಿದ್ದಾರೆ. ಇದನ್ನು ಪ್ರಶ್ನೆ ಮಾಡಲು ಹೋದ ಗ್ರಾಮಸ್ಥರನ್ನೇ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ಗ್ರಾಮಸ್ಥರು ದೂರಿದರು.
ಸುಮಾರು 70 ವರ್ಷಗಳಿಂದಲೂ ಎರಡೂ ಗ್ರಾಮದವರು ಸರ್ಕಾರಿ ಜಮೀನು 38ಪಿ1 ರಲ್ಲಿ 4ಎಕರೆ ಸರ್ಕಾರಿ ಭೂಮಿಯನ್ನು ಸ್ಮಶಾನವಾಗಿ ಬಳಕೆ ಮಾಡಿಕೊಳ್ಳುತ್ತಾ ಬಂದಿದ್ದೇವೆ. ಗ್ರಾಮ ಪಂಚಾಯಿತಿಯವರು ಇಲ್ಲಿ ಬೋರ್‌ವೆಲ್ ಕೊರೆದು ಪಂಪ್‌ಹೌಸ್ ನಿರ್ಮಾಣ ಮಾಡಿಕೊಟ್ಟಿದ್ದಾರೆ. ಈಗ ಏಕಾಏಕಿ ಒತ್ತುವರಿ ಮಾಡಿಕೊಂಡು ಸ್ಮಶಾನದ ದಾರಿಯನ್ನು ಬಂದ್ ಮಾಡಿದ್ದು ಕೂಡಲೇ ಇದನ್ನು ತೆರವುಗೊಳಿಸಬೇಕು. ಇಲ್ಲವಾದಲ್ಲಿ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸುವುದಾಗಿ ಎಂದಾಗಿ ಮಹದೇವಯ್ಯ ತಿಳಿಸಿದರು.
ಗ್ರಾಪಂ ಸದಸ್ಯರಾದ ಚೆಕ್‌ಪೋಸ್ಟ್ ಮೂರ್ತಿ, ಪ್ರಶಾಂತ್, ಸಿದ್ದಯ್ಯನಪುರದ ಮಂಜು, ಮುಖಂಡರಾದ ಕುಮಾರ್,  ಅಂಗಡಿ ವಿನೋದ್, ಕಾರ್ತಿಕ್, ನಾಗೇಂದ್ರ, ರವಿ, ಸೆಲ್ವೆ ದೊರೆ, ನಾಗೇಗೌಡ, ಮೋಹನ್ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

10 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

19 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

19 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago