ಚಾಮರಾಜನಗರ: ನಗರದ ವಸತಿ ರಹಿತ ನಿರಾಶ್ರಿತರ ತಂಗುದಾಣದಲ್ಲಿ ವಿಶ್ವ ವಸತಿ ರಹಿತರ ದಿನಾಚರಣೆ ಆಚರಿಸಲಾಯಿತು. ಜಿಲ್ಲಾ ಕೌಶಲ್ಯಾಭಿವೃದ್ದಿ , ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ನಗರಸಭೆ, ಹಾಗೂ ಮೂಡಲಧ್ವನಿ ವೃದ್ದಾಶ್ರಮ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ನಗರ ಯೋಜನಾ ನಿರ್ದೇಶಕ ಸುಧಾ ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ನಾನಾ ಕಾರಣಗಳಿಂದ ವಯೋವೃದ್ದರು ವಸತಿ ರಹಿತರಾಗುತ್ತಾರೆ ಅಂತಹವರ ಆರೈಕೆಗಾಗಿ ನಗರಸಭೆ ಡೇ ನಲ್ಮ್ ಯೋಜನೆಯಡಿಯಲ್ಲಿ ತೆರೆದಿರುವ ವಸತಿ ರಹಿತ ನಿರಾಶ್ರಿತರ ಆಶ್ರಯ ತಂಗುದಾಣದಲ್ಲಿ ವಯೋವೃದ್ದರಿಗೆ ಆಶ್ರಯ ನೀಡುವ ಜೊತೆಗೆ ಅವರ ಸಂಪೂರ್ಣ ಯೋಗಕ್ಷೇಮ ನೋಡಿಕೊಳ್ಳಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಉತ್ತಮ ನಿರ್ವಹಣೆಯ ಮೂಡಲಧ್ವನಿ ನಿರಾಶ್ರಿತರ ಕೇಂದ್ರವಾಗಿದ್ದು, ಇಲ್ಲಿಯ ವೃದ್ದರು ತಮ್ಮ ಆರೋಗ್ಯ ಕಡೆ ಹೆಚ್ಚು ಗಮನಕೊಡಬೇಕು ಪ್ರತಿನಿತ್ಯ ಯೋಗ, ಧ್ಯಾನ ಮಾಡುವ ಮೂಲಕ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಯೋಜನಾಧಿಕಾರಿ ವೆಂಕಟನಾಯಕ್, ಡಾ.ಉಮಾರಾಣಿ, ಕೌಶಲ್ಯ ಇಲಾಖೆ ವ್ಯವಸ್ಥಾಪಕ ಡಾ.ಪುಟ್ಟಸ್ವಾಮಿ, ಅಂಜಾದ್ ಪಾಷ, ಅನ್ಸರ್ ಖಾನ್, ನವೀನ್, ಮೂಡಲಧ್ವನಿ ವೃದ್ದಾಶ್ರಮದ ಅಧ್ಯಕ್ಷ ಶಂಕರ್ ಇತರರು ಹಾಜರಿದ್ದರು.
ಆರೋಗ್ಯತಪಾಸಣೆ:
ಇದೇ ಸಂದರ್ಭದಲ್ಲಿ ಆಶ್ರಮದ ವಯೋವೃದ್ದರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ, ಉಚಿತ ಔ಼ಷದೋಪಚಾರ ಮಾಡಲಾಯಿತು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…