ಚಾಮರಾಜನಗರ: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗೆ ಮತದಾರರ ಗುರುತಿನ ಆಧಾರ್ ಸಂಖ್ಯೆಯನ್ನು ಸ್ವಯಂ ಪ್ರೇರಿತವಾಗಿ ಜೋಡಣೆ ವಾಡುವ ಸಂಬಂಧ ಸೆ.೪ ಹಾಗೂ ೧೮ರಂದು ಆಧಾರ್ ಜೋಡಣೆ ‘ವಿಶೇಷ ಅಭಿಯಾನ’ವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯನ್ನು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಮತಗಟ್ಟೆ ಮಟ್ಟದ ಮೇಲ್ವಿಚಾರಕರು (ಬಿ.ಎಲ್.ಒ ಸೂಪರ್‌ವೈಸರ್) ಸೆ.೪ ಹಾಗೂ ೧೮ರಂದು ಬೆಳಗ್ಗೆ ೯ ರಿಂದ ಸಂಜೆ ೫ ಗಂಟೆಯವರೆಗೆ ಆಯ್ದ ಮತಗಟ್ಟೆಗಳಲ್ಲಿ ಹಾಜರಾಗಿ, ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.