ಜಿಲ್ಲೆಗಳು

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನೆ

ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಸಂಘದ ಜಿಲ್ಲಾಧ್ಯಕ್ಷ ಕೆ.ಸುಜಾತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ನಾಗಮಣಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಘದ ಜಿಲ್ಲಾಧ್ಯಕ್ಷ ಕೆ.ಸುಜಾತ ಮಾತನಾಡಿ, ಗ್ಯಾಜ್ಯುಯಿಟಿ ಪಾವತಿಸಲು ಕೂಡಲೇ ಸರ್ಕಾರ ನಿರ್ದೇಶನ ನೀಡಬೇಕು, ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷನ ನೀಡಬೇಕು, ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರನ್ನಾಗಿ ಪರಿಗಣಿಸಬೇಕು. ಅನ್ನದೊಟ್ಟಿಗೆ ಅಕ್ಷರ ಕೇಂದ್ರವಾಗಿ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಿ, ಬಲಿಷ್ಠಪಡಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ನಾಗರತ್ನ ಮಾತನಾಡಿ, ನಿವೃತ್ತಿಯಾಗಿರುವ ಅಂಗನವಾಡಿ ನೌಕರರಿಗೆ ಗ್ಯಾಜ್ಯುಯಿಟಿ ನೀಡಬೇಕು. ಅಂಗನವಾಡಿಯಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮೊಬೈಲ್‌ನಲ್ಲಿ ೩ ಬಾರಿ ಲಿಖಿತ ರೂಪದಲ್ಲಿ ಪ್ರತಿ ನಿತ್ಯ ೨ ಬಾರಿ ಹಾಜರಾತಿ ಪುಸ್ತಕಗಳನ್ನು ಕಾರ್ಯಕರ್ತೆ ಬರೆಯಬೇಕು ಎನ್ನುವುದೇ ಮುಖ್ಯ ಕೆಲಸವಾಗಬಾರದು. ಆದ್ದರಿಂದ ಮೊಬೈಲ್ ಅಥವಾ ಪುಸ್ತಕ ಯಾವುದಾದರೊಂದರಲ್ಲಿ ಬರೆಯುವುದನ್ನು ನಿರ್ಧರಿಸಬೇಕು. ಮೊಬೈಲ್ ನಲ್ಲಿ ಮಾಡಬೇಕಾದರೆ ಮೊಬೈಲ್ ಕೊಟ್ಟು ೪ ವರ್ಷಗಳು ಕಳೆದಿದೆ ಮೊಬೈಲ್ ಹಳೆಯದಾಗಿದ್ದು, ಯಾವುದೇ ಕಾರ್ಯಕ್ರಮ ಕೆಲಸ ಮಾಡುತ್ತಿಲ್ಲ. ಆಗಾಗಿ ಮೊಬೈಲ್ ಮೂಲಕ ದಾಖಲಾತಿ ಬರೆಯಬೇಕಾದರೆ ಹೊಸ ಮೊಬೈಲ್ ಕೊಡಬೇಕು. ಕಳೆದ ೯ ತಿಂಗಳನಿAದ ಮೊಟ್ಟೆ ಕೊಟ್ಟಿಲ್ಲ. ತಕ್ಷಣದಲ್ಲಿ ಮೊಟ್ಟೆ ಕೊಡಬೇಕು. ಮುಂಗಡ ಹಣ ಕಟ್ಟಬೇಕು. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಖಜಾಂಚಿ ಜೆ.ಭಾಗ್ಯ, ಚಾಮರಾಜನಗರ ತಾಲೂಕು ಕಾರ್ಯದರ್ಶಿ ಶಾಹಿದಾಬಾನು, ಖಜಾಂಚಿ ಎನ್.ಎಸ್.ಗುರುಲಿಂಗಯ್ಯ, ಯಳಂದೂರು ತಾಲೂಕು ಅಧ್ಯಕ್ಷೆ ಮಿನಾಕ್ಷಿ, ಕಾರ್ಯದರ್ಶಿ ಭಾಗ್ಯ, ಖಜಾಂಚಿ ಕೆಂಪಮ್ಮ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷೆ ಸುಜಿಯಾ, ಕಾರ್ಯದರ್ಶಿ ಗುರುಮಲ್ಲಮ್ಮ, ಖಜಾಂಚಿ ಸುಮಿತ್ರ, ಸಂತೇಮರಹಳ್ಳಿ ಅಧ್ಯಕ್ಷೆ ಪಾರ್ವತಮ್ಮ, ಕಾರ್ಯದರ್ಶಿ ತುಳಸಮ್ಮ, ಖಜಾಂಚಿ ಜಯಮಾಲ, ಸದಸ್ಯರಾದ ರೇವಮ್ಮ, ಅನುಸೂಯ, ಪುಷ್ಷ, ರಾಜಮ್ಮ, ಸರೋಜ, ಸುನೀತರಾಣಿ, ಕಾಂಚನಾ, ಸುಧಾ, ಭಾಗ್ಯಲಕ್ಷ್ಮಿ, ಅನಿತ, ದೇವಮ್ಮ, ಮಂಜಮ್ಮ, ನಿರ್ಮಲ, ರೋಜಕುಮಾರಿ, ಮಹದೇವಮ್ಮ, ಮಂಜುಳ, ಪ್ರೇಮಲತಾ, ಪುಟ್ಟಮ್ಮ, ತುಳಸಮ್ಮ, ನೀಲಾಂಬಿಕೆ, ಸವಿತಾ, ಮೀನಾ, ರೇಣಿಕಾ, ಮಹೇಶ್ವರಿ, ತಾಜುನ್ ಇತರರು ಭಾಗವಹಿಸಿದ್ದರು.

andolanait

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

1 hour ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

2 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

2 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

2 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

3 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

3 hours ago