Mysore
23
overcast clouds

Social Media

ಶನಿವಾರ, 13 ಜೂನ್ 2026
Light
Dark

ಚಾ.ನಗರ : ಚೆಸ್ ಸ್ಪರ್ಧೆಯಲ್ಲಿ ಕು. ಶೋಜನ ರಾಜ್ಯಮಟ್ಟಕ್ಕೆ ಆಯ್ಕೆ

ಚಾಮರಾಜನಗರ: ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಚೆಸ್ ಕ್ರೀಡಾ ಸ್ಪರ್ಧೆಯಲ್ಲಿ ಜೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಕು.ಶೋಜನ ಅವರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ನಗರದ ಡಾ.ಬಿ.‌ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಜೆ.ಎಸ್.ಎಸ್, ಪದವಿ ಪೂರ್ವ ಕಾಲೇಜಿನಿಂದ ಚೆಸ್ ಕ್ರೀಡೆಗೆ ಸ್ಪರ್ಧಿಸಿದ್ದ ಕು.ಶೋಜನ ಅವರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕು.ಶೋಜನ ಅವರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ನಟರಾಜ್ ಅವರ ಪುತ್ರಿಯಾಗಿದ್ದು ಹಲವಾರು ಸಂಘ ಸಂಸ್ಥೆಗಳ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!