ಚಾಮರಾಜನಗರ: ಸೈಕಲ್ ವೀಲಿಂಗ್ ಮಾಡಿದ ವಿಚಾರವಾಗಿ ಎರಡು ಗುಂಪುಗಳ ನಡುವೆ ಶನಿವಾರ ರಾತ್ರಿ ಘರ್ಷಣೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗುವ ವಾತಾವರಣ ನಿರ್ಮಾಣವಾಗಿತ್ತು.
ಚಾ.ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಘರ್ಷಣೆ ನಡೆದಿದ್ದು, ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪುಗಳನ್ನು ಚದುರಿಸಿದ್ದಾರೆ. ಈ ಮೂಲಕ ಪರಿಸ್ಥಿತಿ ಕೈ ಮೀರದಂತೆ ನೋಡಿಕೊಂಡಿದ್ದಾರೆ.
ಲಾಠಿ ಪ್ರಹಾರಕ್ಕೂ ಮುನ್ನ ವೃತ್ತದ ಬಳಿ ಸಾಕಷ್ಟು ಸಂಖ್ಯೆಯಲ್ಲಿ ಎರಡು ಗುಂಪಿನವರು ಸೇರಿ ಗಲಾಟೆಗೆ ಮುಂದಾದರು ಪೊಲೀಸರ ಸಮಯಪ್ರಜ್ಞೆಯಿಂದ ಗಲಾಟೆ ನಿಂತಿದೆ. ಸಂತೇಮರಹಳ್ಳಿ ವೃತ್ತ ಸಮೀಪದ ಸ್ಥಳಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಪೊಲೀಸರು ರಾತ್ರಿ ಗಸ್ತು ತಿರುಗಿದ್ದಾರೆ. ಎರಡೂ ಕಡೆಯ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.