Mysore
17
broken clouds

Social Media

ಮಂಗಳವಾರ, 14 ಜನವರಿ 2025
Light
Dark

ಚಾ.ನಗರ: ಅವಳಿ ಜಲಾಶಯಗಳಿಂದ ತಲಾ 18 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಚಾಮರಾಜನಗರ: ಜಿಲ್ಲೆಯಾದ್ಯಂತ ರಾತ್ರಿಯಿಡೀ ಧಾರಾಕಾರ ಮಳೆ ಸುರಿದ ಹಿನ್ನೆಲೆಯಲ್ಲಿ ಅವಳಿ ಜಲಾಶಯಗಳ ಒಳಹರಿವು ಹೆಚ್ಚಾಗಿದ್ದು, ಸುವರ್ಣಾವತಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಡಲಾಗುತ್ತಿದೆ.

ತಾಲ್ಲೂಕಿನ ಅವಳಿ ಜಲಾಶಯಗಳಾದ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯದಿಂದ ತಲಾ ೧೮ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಸುವರ್ಣಾವತಿ ನದಿ ಮೈದುಂಬಿ ಹರಿಯುತ್ತಿದ್ದು ಹಲವು ಸೇತುವೆಗಳು ಮುಳುಗಡೆಯಾಗಿದ್ದರೆ, ನದಿ ಅಂಚಿನ ಕೆಲವು ಗ್ರಾಮಗಳು ಬಹುತೇಕ ಮುಳುಗಡೆಯಾಗಿದೆ. ಚಾ.ನಗರ, ಯಳಂದೂರು ಹಾಗೂ ಕೊಳ್ಳೇಗಾಲ ತಾಲ್ಲೂಕಿನ ಹಲವಾರು ಗ್ರಾಮಗಳು ಹಾಗೂ ಕೃಷಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಇದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ