ಚಾಮರಾಜನಗರ : ಇದೇ ತಿಂಗಳ 27ರಿಂದ 30ರವರೆಗೆ ನಾಲ್ಕು ದಿನಗಳ ಕಾಲ ಜಿಲ್ಲಾ ದಸರಾಗೆ ಕ್ಷಣಗಣನೆ ಆರಂಭವಾಗಿದೆ.
ಎರಡು ವರ್ಷಗಳ ಬಳಿಕ ಅದ್ದೂರಿ ದಸರಾ ಆಚರಣೆ ಮಾಡಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜುಗೊಂಡಿದೆ. ಕಲಾತಂಡಗಳ ಮೆರವಣಿಗೆ, ರೈತ ದಸರ, ಮಹಿಳಾ ದಸರ, ಕವಿಗೋಷ್ಠಿ, ಪಲಪುಷ್ಪ ಪ್ರದರ್ಶನ, ಚಿತ್ರಕಲಾ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು ದಸರಾ ಸಂಭ್ರಮವನ್ನು ಹೆಚ್ಚಿಸಲಿದೆ.
ನಾಲ್ಕು ದಿನಗಳ ಕಾಲ ಪ್ರತಿ ದಿನ ಮಧ್ಯಾಹ್ನ 3:30 ರಿಂದ ರಾತ್ರಿ 10 ರವರೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮಗಳಿಗೆ ಮೂರು ಕಡೆಗಳಲ್ಲಿ ವೇದಿಕೆಯನ್ನು ಸಿದ್ಧಪಡಿಸಲಾಗಿದೆ. ಚಾಮರಾಜೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ನಿರ್ಮಿಸಲಾಗುವ ಪ್ರಧಾನ ವೇದಿಕೆಯಲ್ಲಿ ಜೆಎಚ್ ಪಟೇಲ್ ಸಭಾಂಗಣದಲ್ಲಿ ಹಾಗೂ ಡಾ. ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸ್ಥಳೀಯ ಕಲಾವಿದರ ಗಾಯನ ಹಾಡು ನೃತ್ಯಗಳ ಜೊತೆಗೆ ಬೆಂಗಳೂರಿನಿಂದ ಬರುವ ವಿವಿಧ ಕಲಾವಿದರು ಪ್ರದರ್ಶನಗಳು ದಸರ ಸಂಭ್ರಮವನ್ನು ಕಳೆಕಟ್ಟಲಿವೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…