ಚಾಮರಾಜನಗರ: ನಗರದ ಸೋಮವಾರಪೇಟೆ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಡಿಮಟ್ಟ ಗುಂಡಿ ಬಿದ್ದಿದ್ದು ಜಿಲ್ಲಾಡಳಿತ ಹಾಗೂ ರಾಜಕಾರಣಿಗಳ ಬೇಜವಬ್ದಾರಿಗೆ ಬೇಸತ್ತು ಸಾರ್ವಜನಿಕರೇ ಗುಂಡಿ ಮುಚ್ಚಿರುವ ಘಟನೆ ನಡೆದಿದೆ.
ನಗರದ ಸೋಮವಾರಪೇಟೆ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಹರದನಹಳ್ಳಿ, ವೆಂಕಟಯ್ಯಛತ್ರ, ಸಿದ್ದಯ್ಯನಪುರ ಹಾಗೂ ಇತರೆ ಗ್ರಾಮಗಳಿಗೆ ತೆರಳುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಸಾಕಷ್ಟು ಸಾರ್ವಜನಿಕರು ಈ ಕುರಿತು ಜಿಲ್ಲಾಡಳಿತ ಹಾಗೂ ರಾಜಕಾರಣಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿರಲಿಲ್ಲ ಇದರಿಂದ ಬೇಸತ್ತ ಈ ರಸ್ತೆಯಲ್ಲಿ ನಿತ್ಯ ಸಂಚರಿಸುವ ಯುವಕರೇ ಮುಂದಾಗಿ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅಮಚವಾಡಿ ಗ್ರಾಮದ ಶಿವಶಂಕರ್ ಚಟ್ಟು ಅವರು ನಮ್ಮನ್ನು ಆಳುವ ಸರ್ಕಾರಗಳು ಮಾಡದ ಕೆಲಸಗಳನ್ನು ಸಾರ್ವಜನಿಕರೇ ಮಾಡಿದರೇ ಸರ್ಕಾರಕ್ಕೆ ಅವಮಾನವಾಗಲಿ ಈ ರೂಪದಲ್ಲಾದರೂ ಸರ್ಕಾರ ಜನರ ಸಂಕಷ್ಟಗಳನ್ನು ಅರಿಯಲಿ ಎಂಬ ಉದ್ದೇಶದಿಂದ ಈ ಭಾಗದ ಕೆಲವು ಗ್ರಾಮಗಳ ಯುವಕರೇ ಸ್ವಯಂ ಪ್ರೇರಿತರಾಗಿ ರಸ್ತೆ ಗುಂಡಿಗಳನ್ನು ಮುಚ್ಚಿದ್ದೇವೆ ಎಂದು ತಿಳಿಸಿದರು.
ಉಪನ್ಯಾಸಕರಾದ ಶ್ರೀಧರ್.ಎಸ್, ಅರಣ್ಯ ಇಲಾಖೆಯ ಮಸಾಕ್ ಸಾಬ್ (ಗುಲ್ಬರ್ಗ), ಮಾದು ಸಿದ್ದಯ್ಯನಪುರ, ವೀರೇಶ್ ಹೊಸೂರ್ ಹಾಗೂ ಮತ್ತಷ್ಟು ಯುವಕರು ಭಾಗವಹಿಸಿದ್ದರು.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…