Mysore
20
mist

Social Media

ಗುರುವಾರ, 25 ಡಿಸೆಂಬರ್ 2025
Light
Dark

ಚಾ.ನಗರ ಜಿಲ್ಲೆಗೂ ಟಾಸ್ಕ್ ಫೋರ್ಸ್ ರಚನೆ ಮಾಡಿ : ಶಾಸಕ ಆರ್ ನರೇಂದ್ರ ಒತ್ತಾಯ

ಹನೂರು : ರಾಜ್ಯದಲ್ಲಿಯೇ ಅತಿ ಹೆಚ್ಚು ಆನೆಗಳು ನಮ್ಮ ಜಿಲ್ಲೆಯಲ್ಲಿದ್ದು ಪ್ರತಿ ವರ್ಷ ಆನೆಗಳಿಂದ ಸಾವು, ನೋವು ಹಾಗೂ ಬೆಳೆ ನಾಶ ವಾಗುತ್ತಿರುವ ಹಿನ್ನೆಲೆ ನಮ್ಮ ಜಿಲ್ಲೆಗೂ ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಶಾಸಕ ಆರ್ ನರೇಂದ್ರ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದರುಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕಳೆದ ಮೂರು ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆನೆ ದಾಳಿಗೆ ಒಬ್ಬರು ಮೃತಪಟ್ಟಿದ್ದರು. ಸ್ಥಳೀಯ ಶಾಸಕ ಮಾಹಿತಿ ಪಡೆಯಲು ಸ್ಥಳಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಸ್ಥಳೀಯರು ರೊಚ್ಚಿಗೆದ್ದು ಅವರ ಮೇಲೆ ಹಲ್ಲೆ ಮಾಡಿರುವ ಬಗ್ಗೆ ವರದಿಯಾಗಿತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ಬಳಿ ಅರಣ್ಯ ಖಾತೆ ಇರುವುದರಿಂದ ಉನ್ನತ ಮಟ್ಟದ ಅರಣ್ಯ ಇಲಾಖೆ ಅಧಿಕಾರಿಗಳ ಸಭೆ ಕರೆದು ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಆನೆ ಹಾವಳಿ ತಡೆಯಲು ಟಾಸ್ಕ್ ಫೋರ್ಸ್ ರಚನೆ ಮಾಡಲು ಆದೇಶ ಹೊರಡಿಸಿದ್ದಾರೆ. ಆದರೆ ರಾಜ್ಯದಲ್ಲಿಯೇ ಅತಿ ಹೆಚ್ಚು ಆನೆಗಳಿರುವ ಜಿಲ್ಲೆ ಚಾಮರಾಜನಗರ, ಹನೂರು ತಾಲೂಕಿನಲ್ಲಿಯೂ ಆನೆ ದಾಳಿಯಿಂದ ಕನಿಷ್ಠ ಇಬ್ಬರು ಮೃತಪಡುತ್ತಿದ್ದಾರೆ. ಸಾಕಷ್ಟು ರೈತರು ಆನೆ ದಾಳಿಯಿಂದ ಬೆಳೆ ನಾಶವಾಗಿ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಮುಖ್ಯಮಂತ್ರಿಗಳು ಚಾಮರಾಜನಗರ ಜಿಲ್ಲೆಗೂ ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಒತ್ತಾಯಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!