ಚಾಮರಾಜನಗರ: ಭಗವದ್ಗೀತೆಯನ್ನು ಶಿಕ್ಷಣದಲ್ಲಿ ಅಳವಡಿಸಬೇಕೆಂಬ ಬೇಡಿಕೆ ಹಿಂದಿನಿಂದಲೂ ಇದೆ. ಅದನ್ನು ಬೇಗ ಈಡೇರಿಸಬೇಕು ಎಂದು ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಒತ್ತಾಯಿಸಿದರು.
ನಗರದ ಡಾ.ರಾಜ್‌ಕುಮಾರ್ ರಂಗಮಂದಿರದಲ್ಲಿ ಬುಧವಾರ ಸಂಜೆ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಮತ್ತು ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಸಹಯೋಗದಲ್ಲಿ ಏರ್ಪಡಿಸಿದ್ದ ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಮಾಜದಲ್ಲಿ ನೈತಿಕ ಅಧಃಪತನ, ಅಪರಾಧ ಪ್ರವೃತ್ತಿ ಹೆಚ್ಚಾಗಿದೆ. ಇದನ್ನು ತಡೆಯಲು ನೈತಿಕ ಶಿಕ್ಷಣ ಬೇಕಾಗಿದೆ. ಅದು ಈ ಭಗವದ್ಗೀತೆಯಲ್ಲಿದೆ. ಹಾಗಾಗಿ ಶಿಕ್ಷಣದಲ್ಲಿ ಅಳವಡಿಕೆ ಸೂಕ್ತ ಎಂದು ಅಭಿಪ್ರಾಯಪಟ್ಟರು.
ವ್ಯಕ್ತಿತ್ವ ವಿಕಸನ, ನೈತಿಕತೆ ಪುನರುತ್ಥಾನ, ಸಾಮಾಜಿಕ ಸಾಮರಸ್ಯ, ರಾಷ್ಟಿçÃಯ ಭಾವೈಕ್ಯತೆ ಮೂಡಿಸುವ ಉದ್ದೇಶದಿಂದ ಈ ಅಭಿಯಾನದ ಉದ್ದೇಶವಾಗಿದೆ. ೨೦೦೭ರಲ್ಲಿ ಅಭಿಯಾನವನು ಆರಂಭಿಸಲಾಗಿತ್ತು. ಜಿಲ್ಲೆಯಲ್ಲೂ ಅಭಿಯಾನವು ನಡೆದಿತ್ತು ಎಂದು ತಿಳಿಸಿದರು.
ತದನಂತರ ಅಭಿಯಾನ ನಿರಂತರವಾಗಿ ನಡೆದಿದೆ. ಮೊದಲ ೪ ವರ್ಷಗಳಲ್ಲಿ ೪ ಜಿಲ್ಲೆಗಳಲ್ಲಿ ಹಮ್ಮಿಕೊಂಡಿದ್ದೇವು. ನಂತರ ಸಮಗ್ರ ಕರ್ನಾಟಕದಲ್ಲಿ ನಡೆಸಿದ್ದು ಈ ವರ್ಷ ಒಂದು ಜಿಲ್ಲೆಯನ್ನು ಕೇಂದ್ರೀಕರಿಸಲಾಗಿದ್ದು ದಾವಣಗೆರೆ ಜಿಲ್ಲೆಯನ್ನು ಆಯ್ದುಕೊಂಡಿದ್ದೇವೆ ಎಂದು ತಿಳಿಸಿದರು.
ವಿವಿಧತೆಯಲ್ಲಿ ಏಕತೆಯನ್ನು ಕಾಣಲು, ಎಲ್ಲರಲ್ಲೂ ಸಾಮರಸ್ಯ ಮೂಡಿಸಲು, ಸುಶಿಕ್ಷಿತರಲ್ಲಿ ಇರುವ ಸಮಾಜ ಘಾತುಕತನವನ್ನು ಹೋಗಲಾಡಿಸಲು, ಅಪರಾಧ ಮನೋಭಾವ ಕಡಿಮೆ ಮಾಡಲು ಭಗವದ್ಗೀತೆಯನ್ನು ಬೋಧಿಸುವ ಅಗತ್ಯವಿದೆ ಎಂದರು.
ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…
ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ…
ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್ ಅವರ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…