ಹನೂರು : ನಾವು ಚುನಾವಣೆಯಲ್ಲಿ ಮೂರು ಬಾರಿ ಸೋತರು ಸಹ ನಾಗಪ್ಪ ಅಭಿಮಾನಿಗಳು ನಮ್ಮ ಮೇಲಿಟ್ಟಿರುವ ವಿಶ್ವಾಸ ಇಂದಿಗೂ ಕಡಿಮೆಯಾಗಿಲ್ಲ ಎಂದು ಮಾಜಿ ಶಾಸಕಿ ಪರಿಮಳ ನಾಗಪ್ಪ ತಿಳಿಸಿದರು.
ಕ್ಷೇತ್ರ ವ್ಯಾಪ್ತಿಯ ಕಾಮಗೆರೆಯ ಗ್ರಾಮದಲ್ಲಿ ಮಾಜಿ ಸಚಿವ ದಿ ಎಚ್ ನಾಗಪ್ಪ ರವರ ಪುಣ್ಯಸ್ಮರಣೆ ಕಾರ್ಯಕ್ರಮ ಸಂಬಂಧ ಮಾಜಿ ಶಾಸಕಿ ಪರಿಮಳ ನಾಗಪ್ಪ ರವರ ನಿವಾಸದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ನನ್ನ ಪತಿಯವರಾದ ದಿವಂಗತ ಎಚ್ ನಾಗಪ್ಪನವರು ಹನೂರು ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ಸಚಿವರಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನ ಮಾನಸದಲ್ಲಿ ಉಳಿಯುವಂತೆ ಮಾಡಿದ್ದಾರೆ ಅದರಂತೆ ನಾನು ಶಾಸಕಿಯಾಗಿದ್ದಾಗಲೂ ಸಹ ನನ್ನ ಕೈಲಾದ ಮಟ್ಟಿಗೆ ಕ್ಷೇತ್ರದ ಅಭಿವೃದ್ಧಿ ಪಡಿಸಿದ್ದೇನೆ. ಎಲ್ಲಾ ಸಮಾಜದವರು ಸಹ ನಮ್ಮ ಮೇಲೆ ಅದೇ ವಿಶ್ವಾಸ ಪ್ರೀತಿ ಇಟ್ಟಿದ್ದಾರೆ.ಕಳೆದ ಮೂರು ಚುನಾವಣೆಯಲ್ಲಿ ನಿರಂತರವಾಗಿ ಸೋಲುತ್ತಿದ್ದೇವೆ ಇದಕ್ಕೆ ಕಾರಣ ಇನ್ನು ತಿಳಿಯಲಾಗಿಲ್ಲ, ನಮ್ಮ ಕುಟುಂಬದ ಮೇಲೆ ಕೆಲವೊಂದು ಆಪಾದನೆ ಇದೆ ರಾಜಕೀಯ ಎಂದ ಮೇಲೆ ಆಪಾದನೆ ಸಹಜ ಮುಂದಿನ ದಿನಗಳಲ್ಲಿ ಎಲ್ಲಾ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುತ್ತೇವೆ,ನನ್ನ ಮಗನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವನನ್ನು ಬೆಳೆಸುವುದು ನಿಮ್ಮ ಜವಾಬ್ದಾರಿ, ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ 25 ಸಾವಿರ ಕ್ಕೂ ಹೆಚ್ಚು ಅಭಿಮಾನಿಗಳನ್ನು ಸೇರಿಸಿ ಕಾರ್ಯಕ್ರಮ ಮಾಡಬೇಕೆಂದಿದ್ದೇವೆ ಎಲ್ಲಾ ಅಭಿಮಾನಿಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.
ಮುಂದಿನ ಜನವರಿ 3ರಂದು ಹಮ್ಮಿಕೊಂಡಿರುವ ಎಚ್ ನಾಗಪ್ಪನವರ 20ನೇ ಪುಣ್ಯ ಸ್ಮರಣೆ ಕಾರ್ಯಕ್ರಮದ ರೂಪರೇಷ ಹಾಗೂ ಆಯೋಜನದ ಬಗ್ಗೆ ಕಾರ್ಯಕರ್ತರು ಹಾಗೂ ನಾಗಪ್ಪ ಅಭಿಮಾನಿಗಳ ಅಭಿಪ್ರಾಯ ಸಂಗ್ರಹಿಸಲಾಯಿತು.
ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಕಣ್ಣೂರು ಬಸವರಾಜಪ್ಪ, ಬಿಜೆಪಿ ಮಂಡಲದ ಕಾರ್ಯದರ್ಶಿ ಭರತ್,ಚಾಮುಲ್ ನಿರ್ದೇಶಕ ನಂಜುಂಡಸ್ವಾಮಿ, ದಿವಂಗತ ಎಚ್ ನಾಗಪ್ಪ ರವರ ಸುಪುತ್ರ ಡಾ. ಪ್ರೀತಮ್ ನಾಗಪ್ಪ, ಗ್ರಾಪಂ ಸದಸ್ಯ ನಾಗರಾಜು,ಮುಖಂಡರಾದ ತೋಟೇಶ್, ಹನೂರು ನಂಜಪ್ಪ ಸೇರಿದಂತೆ ನಾಗಪ್ಪ ಅಭಿಮಾನಿಗಳು ಹಾಜರಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…