ಹನೂರು : ತಾಲೂಕಿನ ಗಡಿ ಗ್ರಾಮ ಅರೆಕಾಡುವಿನ ದೊಡ್ಡಿಯಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು ಇದನ್ನು ತಡೆಗಟ್ಟುವಂತೆ ಗ್ರಾಮದ 30ಕ್ಕೂ ಹೆಚ್ಚು ಮಹಿಳೆಯರು ಎ.ಎಸ್ ಐ ರವಿ ರವರಿಗೆ ಮನವಿ ಮಾಡಿದರು.
ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನ ದೊಡ್ಡಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಆದಿವಾಸಿ ಕುಟುಂಬಗಳಿದ್ದು, ಎಲ್ಲರೂ ಸಹ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಈ ಮಧ್ಯೆ ಗ್ರಾಮದಲ್ಲಿ ಮೂವರು ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವುದರಿಂದ ಕುಡಿತಕ್ಕೆ ದಾಸರಾಗಿದ್ದಾರೆ. ಕೂಲಿ ಹಣವನ್ನೇಲ್ಲ ಕುಡಿತಕ್ಕೆ ವ್ಯಹಿಸುತ್ತಿದ್ದಾರೆ. ಇದರಿಂದ ಸಂಸಾರದಲ್ಲಿ ಗಲಭೆ ಜರುಗುತ್ತಿದ್ದು ಇದರಿಂದ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ, ಇದರಿಂದ ಸಮಾಜದಲ್ಲಿ ಅಶಾಂತಿ ಉಂಟಾಗುತ್ತಿದೆ.ಜೊತೆಗೆ ಯುವಕರು ಸಹ ಮಧ್ಯದ ದಾಸರಾಗುತ್ತಿದ್ದಾರೆ. ಮದ್ಯ ಮಾರಾಟವನ್ನು ನಿಷೇಧಿಸುವಂತೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.ಆದ್ದರಿಂದ ಈ ಬಗ್ಗೆ ಇನ್ನಾದರೂ ಕ್ರಮ ಕೈಗೊಂಡು ಗ್ರಾಮದಲ್ಲಿ ಮಧ್ಯ ಮಾರಾಟವನ್ನು ನಿಲ್ಲಿಸಿ ಎಂದು ಮಹಿಳೆಯರು ಒತ್ತಾಯಿಸಿದರು.
ಎಎಸ್ಐ ರವಿಕುಮಾರ್ ಮಾತನಾಡಿ ವೃತ ನಿರೀಕ್ಷಕ ಸಂತೋಷ ಕಶ್ಯಪ್ ರವರ ಗಮನಕ್ಕೆ ತಂದು ಅವರ ಮಾರ್ಗದರ್ಶನದಲ್ಲಿ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವ ವ್ಯಕ್ತಿಗಳನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಲಾಗುವುದು. ಇದಕ್ಕೂ ಮಿತಿಮೀರಿ ಅವರು ಮಧ್ಯ ಮಾರಾಟ ಮಾಡಿದರೆ ಕಾನೂನಿನಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಈರಮ್ಮ, ದಾಸಮ್ಮ, ಕೆಂಪಮ್ಮ, ಮಾದಮ್ಮ, ಬೋಮ್ಮಮ್ಮ, ಬಸಮ್ಮ, ದುಂಡಮ್ಮ, ಪುಟ್ಟಮ್ಮ ಇನ್ನಿತರರು ಹಾಜರಿದ್ದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…