ಸುದ್ದಿಗೋಷ್ಠಿ ಮುಖಂಡ ಶಿವಮೂರ್ತಿ ಆಗ್ರಹ
ಚಾಮರಾಜನಗರ: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಾದಿಗ ಸಮುದಾಯದ ಪ್ರತಿಭಾಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ್ದು ಖಂಡನೀಯ. ಅಲ್ಲದೆ ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಮೊಕದ್ದಮೆಗಳನ್ನು ಕೈಬಿಡಬೇಕು ಎಂದು ಜಿಲ್ಲಾ ಡಾ ಬಾಬು ಜಗಜೀವನ್ ರಾಮ್ ಯುವ ಜಾಗೃತಿ ವೇದಿಕೆ ಆಗ್ರಹಿಸಿದೆ.
ಡಿ.೧೧ ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಮಾದಿಗ ಸಂಘಟನೆಗಳ ವತಿಯಿಂದ ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಸಂಘಟನೆಗಳ ಮುಖಂಡರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ವೇದಿಕೆ ಜಿಲ್ಲಾಧ್ಯಕ್ಷ ಎಂ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ದೂರಿದರು.
ಪ್ರತಿಭಟನಾ ಸ್ಥಳಕ್ಕೆ ಸರ್ಕಾರದ ಪರ ಆಗಮಿಸಿದ್ದ ಸಚಿವರಾದ ಸೋಮಣ್ಣ ಅವರು ಮನವಿ ಸ್ವೀಕರಿಸಲು ಮುಂದಾದರು. ಆದರೆ, ಪ್ರತಿಭಟನಾಕಾರರು ಮುಖ್ಯಮಂತ್ರಿಗೆ ಮನವಿ ಸಲ್ಲಿಸುವುದಾಗಿ ಪಟ್ಟು ಹಿಡಿದ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ತಳ್ಳಾಟ ನೂಕಾಟ ಶುರುವಾಯಿತು. ಆದರೂ ಪೊಲೀಸÀರು ಸಚಿವರನ್ನು ಪ್ರತಿಭಟನಾ ಸ್ಥಳದ ವೇದಿಕೆಗೆ ಕರೆದೊಯ್ಯಲು ಪ್ರಯತ್ನಪಟ್ಟರು. ಇದನ್ನು ವಿರೋಧಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು ಸರಿಯಲ್ಲ ಎಂದು ಖಂಡಿಸಿದರು.
ಈ ಘಟನೆಯಲ್ಲಿ ಹೋರಾಟಗಾರ ಕರಿಯಪ್ಪ ಗುಡಿಮನಿ ಎಂಬುವವರ ತಲೆಗೆ ಬಲವಾದ ಪೆಟ್ಟುಬಿತ್ತು. ಅನೇಕರಿಗೆ ಸಣ್ಣಮಟ್ಟ ಗಾಯಗಳಾಗಿವೆ. ಇದನ್ನ ಪ್ರಶ್ನಿಸಿದ ಹೋರಾಟಗಾರರಾದ ಅಂಬಣ್ಣ, ಆರೋಲಕ ಮತ್ತು ನೂರಾರು ಪ್ರತಿಭಟನಾಕಾರರನ್ನು ಬಂಧಿಸಿ ಕೇಸು ದಾಖಲಿಸಿದ್ದಾರೆ. ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ದೂರಿದರು.
ಹಿಂದುಳಿದ ಮಾದಿಗ ಸಮುದಾಯ ಒಳ ಮೀಸಲಾತಿ ಕೇಳುವುದು ನ್ಯಾಯಯುತವಾಗಿದೆ. ಈ ಹೋರಾಟ ಸಾಮಾಜಿಕ ನ್ಯಾಯ ಸಿಗುವವರೆಗೂ ನಡೆಯಲಿದೆ. ಡಿ.೧೯ ರಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ನ್ಯಾ.ಸದಾಶಿವ ಆಯೋಗದ ವರದಿಯನ್ನು ಮಂಡಿಸಿ ಒಪ್ಪಿಗೆ ಪಡೆದು ಕೇಂದ್ರ ಸರ್ಕಾಕ್ಕೆ ಶಿಫಾರಸ್ಸು ಮಾಡಬೇಕು. ಸಂವಿಧಾನದ ಅನುಚ್ಛೇದ ೩೪೧ (೩) ತಿದ್ದುಪಡಿಯನ್ನು ತರಬೇಕೆಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ವೇದಿಕೆಯ ಮುಖಂಡರಾದ ಬಾಲರಾಜು, ನಿಟ್ರೆ ಮಹದೇವು, ಸೋಮಶೇಖರ್, ಮಹದೇವು, ರಾಜಣ್ಣ, ಗೋವಿಂದ್ ಹಾಜರಿದ್ದರು
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…