ಹನೂರು : ಭಾನುವಾರ ಗೋವಾದಲ್ಲಿ ನಡೆದ ಅಂತರರಾಜ್ಯ ಕಿಕ್ ಬಾಕ್ಸಿoಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿರುವ ತಾಲೂಕಿನ ಶಶಾಂಕ್. ಪಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ತಾಲೂಕಿನ ಮಹದೇಶ್ವರ ಬೆಟ್ಟದ ನಿವಾಸಿಯಾದ ಪುಟ್ಟಸ್ವಾಮಿ (ಶಿಕ್ಷಕರು ದೊಮ್ಮನಗದ್ದೆ ಸರ್ಕಾರಿ ಶಾಲೆ ) ಮಾದಲಾಂಬಿಕಾ ಪುತ್ರನಾದ ಇವರು ಭಾನುವಾರ ಗೋವಾದಲ್ಲಿ ನಡೆದ ಅಂತಾರರಾಜ್ಯ ಕಿಕಿ ಬಾಕ್ಸಿoಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿದ್ದಾರೆ.
ಏಷ್ಯಾ ಕಪ್ ಗೆ ಆಯ್ಕೆ : ತಾಲೂಕಿನ ಚಿನ್ನದ ಹುಡುಗ ಶಶಾಂಕ್ ಮುಂದಿನ ಡಿಸೆoಬರ್ ತಿಂಗಳ 10 ರಿಂದ 18 ರವರೆಗೆ ಥೈಲ್ಯಾಂಡ್ ನಲ್ಲಿ ನಡೆಯುವ ಏಷ್ಯಾ ಕಪ್ ಕಿಕ್ ಬಾಕ್ಸಿoಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲಿದ್ದಾನೆ.
ಚಿನ್ನ ಪಡೆಯುತ್ತಿರುವ ಚಿನ್ನದಂತ ಹುಡುಗ : ಈ ಹಿಂದೆ ನೇಪಾಳ ಹಾಗೂ ಪಂಜಾಬಿನ ಅಮೃತ ಸರದಲ್ಲಿ ನಡೆದ ಕಿಕ್ ಬಾಕ್ಸಿoಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿರುವುದನ್ನು ನಾವು ಇಲ್ಲಿ ಸ್ಮರಿಸಬಹುದು..
ತಾಲೂಕಿನ ಕೀರ್ತಿ ಪತಾಕೆ : ಅಂತಾರರಾಜ್ಯ ಮಟ್ಟದಲ್ಲಿ ರಾಷ್ಟ್ರ ಮಟ್ಟದಲ್ಲಿ ಗುರುತಿಸಿ ಕೊಳ್ಳುವ ಮೂಲಕ ಚಿನ್ನದ ಪದಕ ಪಡೆಯುವ ಮೂಲಕ ನಮ್ಮ ತಾಲೂಕಿನ ಕೀರ್ತಿ ಪತಾಕೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಅಲ್ಲದೆ ಗ್ರಾಮೀಣ ಪ್ರತಿಭೆಯನ್ನು ಜನರು ಸಹ ಮತ್ತಷ್ಟು ಉತ್ತುಂಗಕ್ಕೆ ಬೆಳೆಯಲಿ ಎಂದು ತಾಲೂಕಿನ ಜನತೆ ಹಾರೈಸಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…
ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…