ಜಿಲ್ಲೆಗಳು

ಹನೂರು ವ್ಯಾಪ್ತಿಯ ಸಮಾಜಮುಖಿ ಕಾರ್ಯಗಳಿಗೆ ಸಿದ್ದಲಿಂಗಮಹಾಸ್ವಾಮಿ ಮೆಚ್ಚುಗೆ

ಹನೂರು: ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ಮುಖಂಡ ನಿಶಾಂತ್ ಸೇವಾ ಕಾರ್ಯ ಶ್ಲಾಘನೀಯವಾದುದು ಎಂದು ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಮಹಾಸ್ವಾಮಿಗಳು ಶ್ಲಾಘಿಸಿದರು.

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಆಯೋಜಿಸಲಾಗಿದ್ದ ನೂತನವಾಗಿ ನವೀಕರಣಗೊಂಡಿರುವ ಗುರುಮಲ್ಲೇಶ್ವರ ದಾಸೋಹ ಮಠ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಮೈಸೂರು ಮತ್ತು ಚಾಮರಾಜನಗರ ಭಾಗದಲ್ಲಿ ದಾಸೋಹ ಮತ್ತು ಕಾಯಕದ ಮೂಲಕ ಧಾರ್ಮಿಕ ಕ್ರಾಂತಿ ಮಾಡಿದವರು ಗುರುಮಲ್ಲೇಶ್ವರರು. ಈ ಭಾಗದಲ್ಲಿ ಅವರು ಹಾಕಿಕೊಟ್ಟ ಗುರು ಪರಂಪರೆಯ ಮಠಗಳನ್ನು ನವೀಕರಣ ಗೊಳಿಸುವ ಕಾರ್ಯವನ್ನು ಕೈಗೆತ್ತಿಕೊಂಡು ಸಾರ್ವಜನಿಕರಿಗೆ ಅನುಕೂಲವಾಗುವ ಕೆಲಸ ಮಾಡುತ್ತಿರುವ ನಿಶಾಂತ್ ರವರ ಸೇವೆಯನ್ನು ತಾವೆಲ್ಲರೂ ಬಳಸಿಕೊಳ್ಳುವ ಮೂಲಕ ಸಾಮಾಜಿಕ ಅಭಿವೃದ್ಧಿಗೆ ಕಾರಣೀಭೂತರಾಗಬೇಕು ಎಂದರು.

ಮುಖಂಡ ಪೊನ್ನಾಚಿ ಮಹದೇವಸ್ವಾಮಿ ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಬಯಸದೆ ಅಭಿವೃದ್ದಿ ಕಾರ್ಯದಲ್ಲಿ ತೊಡಗಿಸಿಕೊಂಡು ಅತ್ಯಂತ ಕಡಿಮೆ ಅವಧಿಯಲ್ಲೇ ಜನಪ್ರಿಯತೆ ಗಳಿಸಿರುವ ನಿಶಾಂತ್ ಅವರು ಲಿಂಗಾಯತ ಸಮುದಾಯಕ್ಕೆ ಮಾತ್ರ ಸೇವೆ ನೀಡದೆ, ಕ್ಷೇತ್ರದ ಇತರೆ ಸಮುದಾಯಗಳ ಅಭಿವೃದ್ಧಿಗೂ ಶ್ರಮಿಸುತ್ತಿದ್ದಾರೆ. ಅವರ ಸೇವೆಯನ್ನು ಪಡೆದ ನಾವೆಲ್ಲರೂ ಮುಂದಿನ ದಿನಗಳಲ್ಲಿ ನಿಶಾಂತ್ ರವರನ್ನು ಬೆಂಬಿಲಿಸಬೇಕು ಎಂದು ತಿಳಿಸಿದರು.

ಮಲೆ ಮಹದೇಶ್ವರ ಬೆಟ್ಟ ಸಾಲೂರು ಮಠದ ಪೀಠಾಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ಸಭೆಯಲ್ಲಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗಮಹಾಸ್ವಾಮಿ, ದೇವನೂರು ಮಠದ ಮಹಾಂತಸ್ವಾಮಿ, ಹೊಂದರಬಾಳು ಮಠದ ನೀಲಕಂಠ ಸ್ವಾಮಿ, ಆಲಹಳ್ಳಿ ಮಠದ ಶಿವಕುಮಾರ ಸ್ವಾಮಿಗಳು ದಿವ್ಯ ಸಾನಿದ್ಯವಹಿಸಿದ್ದರು. ಬಿಜೆಪಿ ಮುಖಂಡ ನಿಶಾಂತ್, ಕೊಳ್ಳೇಗಾಲ ತಾಲ್ಲೂಕು ವೀರಶೈವ ಸಂಘದ ಅಧ್ಯಕ್ಷ ಮಹದೇವ ಪ್ರಸಾದ್, ಪಾಳ್ಯ ಗ್ರಾಮದ ಯಜಮಾನರು, ಯುವಕರು ಮತ್ತು ಸಾರ್ವಜನಿಕರು ಹಾಜರಿದ್ದರು.

andolanait

Recent Posts

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

5 mins ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

11 mins ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

1 hour ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

2 hours ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

2 hours ago

ಬಿ.ಆರ್.ಟಿ ವಲಯದಲ್ಲಿ ಮತ್ತೆ ಕಾಡ್ಗಿಚ್ಚು : 20 ಎಕರೆ ಅರಣ್ಯ ನಾಶ

ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…

3 hours ago