Mysore
23
broken clouds

Social Media

ಬುಧವಾರ, 25 ಫೆಬ್ರವರಿ 2026
Light
Dark

ಚಾ.ನಗರ : ಜೋಡೊ ಯಾತ್ರೆ ಹಿನ್ನೆಲೆ ಜಿಲ್ಲೆಯಾದ್ಯಂತ 2 ದಿನ ಮದ್ಯ ಮಾರಾಟ ನಿಷೇಧ

ಚಾಮರಾಜನಗರ : ಕಾಂಗ್ರೆಸ್‌ ಪಕ್ಷದ ವತಿಯಿಂದ ಆಯೋಜನೆ ಮಾಡಿರುವ ಜೋಡೋ ಯಾತ್ರೆಯ ಹಿನ್ನೆಲೆ ಕಾಂಗ್ರೆಸ್‌ ಪಕ್ಷದ ಹಲವು ನಾಯಕರುಗಳು ಹಾಗೂ ಹಲವೆಡೆಯಿಂದ ಸಾಕಷ್ಟು ಸಂಖ್ಯೆಯಲ್ಲಿ ಪಕ್ಷದ ನಾಯಕರುಗ:ು ಹಾಗೂ ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಹಿನ್ನೆಲೆ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಜಿಲ್ಲೆಯಲ್ಲಿ ನಾಳೆ 30-09-2022 ಮತ್ತು ನಾಳಿಂದು 1-10-2022  ರ ಮಧ್ಯರಾತ್ರಿಯ ವರೆಗೆ  ಎರಡು ದಿನಗಳ ಕಾಲ  ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಅವರು ಆದೇಶವನ್ನು ಹೊರಡಿಸಿದ್ದಾರೆ.
ಭಾರತ್‌ ಜೋಡೋ ಯಾತ್ರೆ ಸಂಬಂಧವಾಗಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ 2 ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!