ಕೊಳ್ಳೇಗಾಲ : ನಕ್ಷತ್ರ ಆಮೆಯನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.
ನೆಲಮಂಗಲ ತಾಲ್ಲೂಕಿನ ಮಂಚೇನಹಳ್ಳಿ ಧರ್ಮನಾಯಕತಾಂಡ್ಯ ಗ್ರಾಮದ ಆನಂದನಾಯಕ(31), ಬೆಂಗಳೂರು ಉತ್ತರ ಚುಕ್ಕಬಿದರಕಲ್ಲು ಗ್ರಾಮದ ರವಿ(47) ಬಂಧಿತ ಆರೋಪಿಗಳು. ಮತ್ತೋರ್ವ ಆರೋಪಿ, ವಾಜರಹಳ್ಳಿ ಗ್ರಾಮದ ಲಕ್ಷ್ಮೀ ತಲೆ ಮರೆಸಿಕೊಂಡಿದ್ದಾರೆ. ಆರೋಪಿ ಬಳಿಯಿದ್ದ ನಾಲ್ಕು ನಕ್ಷತ್ರ ಆಮೆಗಳು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳು ಅಕ್ರಮವಾಗಿ ಹಣ ಸಂಪಾದನೆ ಮಾಡಲು ನಾಲ್ಕು ಜೀವಂತ ನಕ್ಷತ್ರ ಆಮೆಗಳನ್ನು ಕಳ್ಳಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಸಾಗಿಸುತ್ತಿರುವುದರ ಖಚಿತ ಮಾಹಿತಿ ಇಲ್ಲಿನ ಅರಣ್ಯ ಸಂಚಾರಿ ದಳದ ಪಿಎಸ್ಐ ವಿಜಯರಾಜ್ ಹಾಗೂ ಅವರ ಸಿಬ್ಬಂದಿಗಳು ಜೊತೆ ತಾತ್ಕಾಲಿಕ ಬಸ್ ನಿಲ್ದಾಣದ ಬಳಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಈ ಸಂಬಂಧ ಅರಣ್ಯ ಸಂಚಾರಿ ದಳದ ಕಚೇರಿಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿತ ಆರೋಪಗಳನ್ನು ನ್ಯಾಯಾಂಗದ ಮುಂದೆ ಹಾಜರು ಪಡಿಸಲಾಯಿತು.
ದಾಳಿಯಲ್ಲಿ ಅರಣ್ಯ ಸಂಚಾರಿ ದಳದ ಮುಖ್ಯ ಪೇದೆಗಳಾದ ತಖೀಉಲ್ಲಾ, ಬಸವರಾಜು, ಸ್ವಾಮಿ, ರಾಮಚಂದ್ರ, ಶಂಕರ, ಚಾಲಕ ಪ್ರಭಾಕರ ಇದ್ದರು.
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…
ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು,…