ಹನೂರು: ಮಲೆ ಮಹದೇಶ್ವರ ಭಕ್ತರನ್ನು ಕರೆತರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಪರಿಣಾಮ 25 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಾದ ತಾಳಬೆಟ್ಟದ ಸಮೀಪ ನಡೆದಿದೆ.
ದೀಪಾವಳಿ ಜಾತ್ರೆ ಮುಗಿಸಿಕೊಂಡು ಮಲೆಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್ ಗುಂಡಿಯೊಂದಕ್ಕೆ ಇಳಿದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಪರಿಣಾಮ 25 ಮಂದಿ ಗಾಯಗೊಂಡಿದ್ದಾರೆ. ಚಾಲಕ ಚಂದ್ರಶೇಖರ್ ಅವರಿಗೆ ಕೈ ಮತ್ತು ಹೊಟ್ಟೆ ಭಾಗ, ಕಂಡಕ್ಟರ್ ಗೆ ಬೆನ್ಜು ಮತ್ತು ಹೊಟ್ಟೆ ಹಾಗೂ ಇಬ್ಬರು ಪ್ರಯಾಣಿಕರಿಗೆ ಹೆಚ್ಚು ಪೆಟ್ಟಾದ ಪರಿಣಾಮ ಮೈಸೂರಿಗೆ ರವಾನಿಸಲಾಗಿದೆ. ಗಾಯಗೊಂಡ ಇನ್ನುಳಿದ 21 ಮಂದಿಯನ್ನು ಕೊಳ್ಳೇಗಾಲ ಆಸ್ಪತ್ರೆಗೆ ರವಾನಿಸಲಾಗಿದೆ.
KA:57 F:866 ಸಂಖ್ಯೆಯ ಈ ಬಸ್ ಮದ್ದೂರು ಘಟಕದ್ದಾಗಿದ್ದು 51 ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.