ಯಳಂದೂರು: ಸುವರ್ಣಾವತಿ ಹೊಳೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹವು ಗುರುವಾರ ತಾಲ್ಲೂಕಿನ ಬೂದಿತಿಟ್ಟು ಗ್ರಾಮದ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ.
ತಾಲ್ಲೂಕಿನ ಅಂಬಳೆ ಗ್ರಾಮದ ಮಂಜು (೪೫) ಮೃತರು ಎಂದು ಗುರುತಿಸಲಾಗಿದೆ. ಮಂಗಳವಾರ ಈತ ತನ್ನ ಪತ್ನಿಯ ಗ್ರಾಮವಾದ ಬೂದಿತಿಟ್ಟುಗೆ ತೆರಳುವಾಗ ರಭಸವಾಗಿ ಹರಿಯುತ್ತಿದ್ದ ಸುವರ್ಣಾವತಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದರು. ಹೊಳೆಯಲ್ಲಿ ನೀರಿನ ಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ಬೂದಿತಿಟ್ಟು ರಸ್ತೆಯ ಕಬ್ಬಿನ ಗದ್ದೆಯಲ್ಲಿ ಈತನ ಕಳೇಬರ ಕಂಡು ಬಂದಿದೆ.
ಕೂಡಲೇ ಇದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರ ತಂಡ ಶವವನ್ನು ಗ್ರಾಮಸ್ಥರ ಸಹಕಾರದೊಂದಿಗೆ ಹೊರ ತೆಗೆದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…