ಮುಖ್ಯಮಂತ್ರಿಯಿಂದ ವರ್ಚುಯಲ್ ಮೂಲಕ ಚಾಲನೆ
ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ೧೦ನೇ ವಾರ್ಡ್ಗೆ ಸೇರಿದ ಕರಿನಂಜನಪುರ ಬಡಾವಣೆಯಲ್ಲಿ ತೆರೆದಿರುವ ‘ನಮ್ಮ ಕ್ಲಿನಿಕ್’ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ವರ್ಚುವಲ್ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ನಮ್ಮ ಕ್ಲಿನಿಕ್ ನಿರಂತರವಾಗಿ ನಡೆದು ಜನರ ಸೇವೆಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಅವರು, ಜಿಲ್ಲೆಯಲ್ಲಿ ಎಲ್ಲೆಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭವಾಗಿದೆ. ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆಯೇ ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರು, ನಗರದ ಕರಿನಂಜನಪುರ ಬಡಾವಣೆ ಹಾಗೂ ಗುಂಡ್ಲುಪೇಟೆಯಲ್ಲಿ ಪ್ರಾರಂಭಿಸಲಾಗಿದೆ. ಕೊಳ್ಳೇಗಾಲದಲ್ಲಿ ಇನ್ನೇರಡು ದಿನಗಳಲ್ಲಿ ಪ್ರಾರಂಭವಾಗಲಿದೆ. ನಮ್ಮ ಕ್ಲಿನಿಕ್‌ಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ನಮ್ಮ ಕ್ಲಿನಿಕ್‌ನಲ್ಲಿ ವೈದ್ಯರು, ನರ್ಸ್, ಪ್ರಯೋಗಾಲಯ ತಂತ್ರಜ್ಞ, ತಾಂತ್ರಿಕ ಸಿಬ್ಬಂದಿ ನೇಮಿಸಿದ್ದು, ಔಷಧ ವಿತರಣೆಗೂ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಸಂಬಂಧ ಜನರಿಗೆ ಅರಿವು ಮೂಡಿಸಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಬಳಿಕ ಮುಖ್ಯಮಂತ್ರಿ ಅವರು ಸ್ಥಳೀಯ ವಾಸಿ ಸುಧಾ ಎಂಬಾಕೆಯೊಂದಿಗೆ ಮಾತನಾಡಿ, ನೀವು ಕ್ಲಿನಿಕ್ ಹತ್ತಿರ ಇದ್ದಿರಾ, ನಿಮ್ಮದು ಯಾವ ಏರಿಯಾ, ಈ ಮೊದಲು ಇಂತಹ ಕ್ಲಿನಿಕ್ ಇತ್ತೇನು, ಇದರಿಂದ ಅನುಕೂಲ ಆಗಲಿದೆಯೇ ? ಎಂದು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸುಧಾ ಅವರು, ಕ್ಲಿನಿಕ್ ತೆರೆದಿದ್ದರಿಂದ ತುಂಬಾ ಅನುಕೂಲವಾಗಿದೆ ಎಂದರು. ಕ್ಲಿನಿಕ್‌ನಲ್ಲಿ ಉಚಿತವಾಗಿ ಚಿಕಿತ್ಸೆ ದೊರಕಲಿದೆ ಸದುಪಯೋಗ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.
ಇದೇ ವೇಳೆಯಲ್ಲಿ ಮುಖ್ಯಮಂತ್ರಿ ಜೊತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹಾಜರಿದ್ದರು. ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷೆ ಆಶಾ, ಸದಸ್ಯ ಮನೋಜ್‌ಪಟೇಲ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಶ್ವೇಶ್ವರಯ್ಯ, ತಾಲೂಕು ವೈದ್ಯಾಧಿಕಾರಿ ಡಾ.ಶ್ರೀನಿವಾಸ್, ವೈದ್ಯಾಧಿಕಾರಿ ಡಾ.ಮಮತಾ ಇತರರಿದ್ದರು.
ನಮ್ಮ ಕ್ಲಿನಿಕ್‌ನಲ್ಲಿ ೧೨ ಸೇವೆ
ತಾಯಿ ಆರೋಗ್ಯ ನಿರ್ವಹಣೆ.
ಬಾಣಂತಿ ಹಾಗೂ ಚುಚ್ಚುಮದ್ದು ಸೇವೆ
ನವಜಾತ ಶಿಶುಗಳ ಆರೈಕೆ.
ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ನಿರ್ವಹಣೆ.
ಹಿರಿಯ ನಾಗರೀಕರ ಅಂತಿಮ ಹಂತದ ಆರೋಗ್ಯ ಪಾಲನೆ.
ಕಣ್ಣು ಹಾಗೂ ದಂತ ತಪಾಸಣೆ, ಚಿಕಿತ್ಸೆ.
ತುರ್ತು ವೈದ್ಯಕೀಯ ಸೇವೆ.
ಮಾನಸಿಕ ಆರೋಗ್ಯ ಸೇವೆ
ಯರ‍್ಯಾರು ಇರಲಿದ್ದಾರೆ:
ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿ, ಪ್ರಯೋಗಾಲಯ ತಂತ್ರಜ್ಞ, ಫಾರ್ಮಾಸಿಸ್ಟ್, ನರ್ಸ್, ಕಿರಿಯ ದರ್ಜೆ ಸಹಾಯಕರಿದ್ದು, ಭಾನುವಾರ ಹೊರತುಪಡಿಸಿ ಇತರೆ ದಿನಗಳಲ್ಲಿ ಬೆಳಗ್ಗೆ ೯.೩೦ ರಿಂದ ಸಂಜೆ ೬.೩೦ ಗಂಟೆ ತನಕ ಸೇವೆ ದೊರಕಲಿದೆ.
ವೈದ್ಯರ, ಪ್ರಯೋಗಾಲಯ ತಂತ್ರಜ್ಞ , ಚುಚ್ಚುಮದ್ದು ನೀಡಿಕೆ, ಕಿರಿಯ ದರ್ಜೆ ಸಹಾಯಕರ ಕೊಠಡಿಗಳಿದ್ದು, ನಿರೀಕ್ಷಣಾ ಸ್ಥಳ ಮತ್ತು ಶೌಚಗೃಹದ ಸೌಲಭ್ಯವಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…