ಜಿಲ್ಲೆಗಳು

ಚಾ.ನಗರದಲ್ಲಿ ‘ನಮ್ಮ ಕ್ಲಿನಿಕ್’ ಉದ್ಘಾಟನೆ

ಮುಖ್ಯಮಂತ್ರಿಯಿಂದ ವರ್ಚುಯಲ್ ಮೂಲಕ ಚಾಲನೆ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ೧೦ನೇ ವಾರ್ಡ್ಗೆ ಸೇರಿದ ಕರಿನಂಜನಪುರ ಬಡಾವಣೆಯಲ್ಲಿ ತೆರೆದಿರುವ ‘ನಮ್ಮ ಕ್ಲಿನಿಕ್’ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ವರ್ಚುವಲ್ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ನಮ್ಮ ಕ್ಲಿನಿಕ್ ನಿರಂತರವಾಗಿ ನಡೆದು ಜನರ ಸೇವೆಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಅವರು, ಜಿಲ್ಲೆಯಲ್ಲಿ ಎಲ್ಲೆಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭವಾಗಿದೆ. ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆಯೇ ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರು, ನಗರದ ಕರಿನಂಜನಪುರ ಬಡಾವಣೆ ಹಾಗೂ ಗುಂಡ್ಲುಪೇಟೆಯಲ್ಲಿ ಪ್ರಾರಂಭಿಸಲಾಗಿದೆ. ಕೊಳ್ಳೇಗಾಲದಲ್ಲಿ ಇನ್ನೇರಡು ದಿನಗಳಲ್ಲಿ ಪ್ರಾರಂಭವಾಗಲಿದೆ. ನಮ್ಮ ಕ್ಲಿನಿಕ್‌ಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ನಮ್ಮ ಕ್ಲಿನಿಕ್‌ನಲ್ಲಿ ವೈದ್ಯರು, ನರ್ಸ್, ಪ್ರಯೋಗಾಲಯ ತಂತ್ರಜ್ಞ, ತಾಂತ್ರಿಕ ಸಿಬ್ಬಂದಿ ನೇಮಿಸಿದ್ದು, ಔಷಧ ವಿತರಣೆಗೂ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಸಂಬಂಧ ಜನರಿಗೆ ಅರಿವು ಮೂಡಿಸಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಬಳಿಕ ಮುಖ್ಯಮಂತ್ರಿ ಅವರು ಸ್ಥಳೀಯ ವಾಸಿ ಸುಧಾ ಎಂಬಾಕೆಯೊಂದಿಗೆ ಮಾತನಾಡಿ, ನೀವು ಕ್ಲಿನಿಕ್ ಹತ್ತಿರ ಇದ್ದಿರಾ, ನಿಮ್ಮದು ಯಾವ ಏರಿಯಾ, ಈ ಮೊದಲು ಇಂತಹ ಕ್ಲಿನಿಕ್ ಇತ್ತೇನು, ಇದರಿಂದ ಅನುಕೂಲ ಆಗಲಿದೆಯೇ ? ಎಂದು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸುಧಾ ಅವರು, ಕ್ಲಿನಿಕ್ ತೆರೆದಿದ್ದರಿಂದ ತುಂಬಾ ಅನುಕೂಲವಾಗಿದೆ ಎಂದರು. ಕ್ಲಿನಿಕ್‌ನಲ್ಲಿ ಉಚಿತವಾಗಿ ಚಿಕಿತ್ಸೆ ದೊರಕಲಿದೆ ಸದುಪಯೋಗ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.
ಇದೇ ವೇಳೆಯಲ್ಲಿ ಮುಖ್ಯಮಂತ್ರಿ ಜೊತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹಾಜರಿದ್ದರು. ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷೆ ಆಶಾ, ಸದಸ್ಯ ಮನೋಜ್‌ಪಟೇಲ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಶ್ವೇಶ್ವರಯ್ಯ, ತಾಲೂಕು ವೈದ್ಯಾಧಿಕಾರಿ ಡಾ.ಶ್ರೀನಿವಾಸ್, ವೈದ್ಯಾಧಿಕಾರಿ ಡಾ.ಮಮತಾ ಇತರರಿದ್ದರು.

ನಮ್ಮ ಕ್ಲಿನಿಕ್‌ನಲ್ಲಿ ೧೨ ಸೇವೆ

ತಾಯಿ ಆರೋಗ್ಯ ನಿರ್ವಹಣೆ.
ಬಾಣಂತಿ ಹಾಗೂ ಚುಚ್ಚುಮದ್ದು ಸೇವೆ
ನವಜಾತ ಶಿಶುಗಳ ಆರೈಕೆ.
ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ನಿರ್ವಹಣೆ.
ಹಿರಿಯ ನಾಗರೀಕರ ಅಂತಿಮ ಹಂತದ ಆರೋಗ್ಯ ಪಾಲನೆ.
ಕಣ್ಣು ಹಾಗೂ ದಂತ ತಪಾಸಣೆ, ಚಿಕಿತ್ಸೆ.
ತುರ್ತು ವೈದ್ಯಕೀಯ ಸೇವೆ.
ಮಾನಸಿಕ ಆರೋಗ್ಯ ಸೇವೆ

ಯರ‍್ಯಾರು ಇರಲಿದ್ದಾರೆ:

ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿ, ಪ್ರಯೋಗಾಲಯ ತಂತ್ರಜ್ಞ, ಫಾರ್ಮಾಸಿಸ್ಟ್, ನರ್ಸ್, ಕಿರಿಯ ದರ್ಜೆ ಸಹಾಯಕರಿದ್ದು, ಭಾನುವಾರ ಹೊರತುಪಡಿಸಿ ಇತರೆ ದಿನಗಳಲ್ಲಿ ಬೆಳಗ್ಗೆ ೯.೩೦ ರಿಂದ ಸಂಜೆ ೬.೩೦ ಗಂಟೆ ತನಕ ಸೇವೆ ದೊರಕಲಿದೆ.
ವೈದ್ಯರ, ಪ್ರಯೋಗಾಲಯ ತಂತ್ರಜ್ಞ , ಚುಚ್ಚುಮದ್ದು ನೀಡಿಕೆ, ಕಿರಿಯ ದರ್ಜೆ ಸಹಾಯಕರ ಕೊಠಡಿಗಳಿದ್ದು, ನಿರೀಕ್ಷಣಾ ಸ್ಥಳ ಮತ್ತು ಶೌಚಗೃಹದ ಸೌಲಭ್ಯವಿದೆ.

andolanait

Recent Posts

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

8 mins ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

5 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

12 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

12 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

12 hours ago