ಜಿಲ್ಲೆಗಳು

ಚಾ. ನಗರ ಹಳೆ ಜಿಲ್ಲಾಸ್ಪತ್ರೆ : ಇಂದಿನಿಂದ ಹೊರ ರೋಗಿಗಳ ಸೇವೆ ಆರಂಭ

ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಹಳೆ ಜಿಲ್ಲಾಸ್ಪತ್ರೆ ಕಟ್ಟಡದಲ್ಲಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಆಡಳಿತ ಸೋಮವಾರದಿಂದ ಹೊರರೋಗಿ ವಿಭಾಗಗಳನ್ನು ಪುನಾರಂಭಿಸಲಿದೆ.

ಕಳೆದ ಅಕ್ಟೋಬರ್‌ನಲ್ಲಿ ನಗರದ ಹೊರವಲಯದ ಯಡಬೆಟ್ಟದಲ್ಲಿ ಸಿಮ್ಸ್ ಬೋಧನಾ ಆಸ್ಪತ್ರೆ ಉದ್ಘಾಟನೆ ಆದ ಬಳಿಕ ಹಳೆ ಜಿಲ್ಲಾಸ್ಪತ್ರೆಯಲ್ಲಿದ್ದ ಹೆರಿಗೆ ಮತ್ತು ಮಕ್ಕಳ ವಿಭಾಗಗಳು, ಸ್ಕ್ಯಾನಿಂಗ್ ಕೇಂದ್ರವನ್ನು ಬಿಟ್ಟು ಉಳಿದೆಲ್ಲಾ ವಿಭಾಗಗಳನ್ನು ಯಡಬೆಟ್ಟದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ನಂತರ ಹಳೆ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಿಲಾಗಿತ್ತು. ಕೊರೊನಾ ಕಡಿಮೆಯಾದ ನಂತರ ಕಟ್ಟಡ ಖಾಲಿ ಬಿದ್ದಿತ್ತು. ಆಸ್ಪತ್ರೆ ಸ್ಥಳಾಂತರ ಆದ ಬಳಿಕ ಹಳೆ ಜಿಲ್ಲಾಸ್ಪತ್ರೆಯಲ್ಲಿ ಮೊದಲಿನಂತೆ ವೈದ್ಯಕೀಯ ಸೇವೆ ಲಭ್ಯವಾಗಬೇಕು ಎಂಬ ಕೂಗು ಸಾರ್ವಜನಿಕ ವಲಯದಿಂದ ಕೇಳಿ ಬಂದಿತ್ತು. ಹಲವು ಸಂಘಟನೆಗಳು ಪ್ರತಿಭಟನೆಯನ್ನೂ ಮಾಡಿದ್ದವು.
ನಗರದಿಂದ ೭ ಕಿ.ಮೀ ದೂರದಲ್ಲಿರುವ ಯಡಬೆಟ್ಟಕ್ಕೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಹೋಗುವ ಅನಿವಾರ್ಯತೆ ಬಗ್ಗೆ ರೋಗಿಗಳು ಅಳಲು ತೋಡಿಕೊಂಡಿದ್ದರು. ಆಗಾಗ ಮಾಧ್ಯಮಗಳು ಕೂಡ ಈ ಬಗ್ಗೆ ಬೆಳಕು ಚೆಲ್ಲಿದ್ದವು.
ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಮಳೆ, ಪ್ರವಾಹ ಹಾನಿ ಸಂಬಂಧ ನಡೆಸಿದ್ದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೆ ಚಿಕಿತ್ಸೆ ಆರಂಭಿಸಲು ಸಿಮ್ಸ್ ಡೀನ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದರು.
ಸಚಿವರ ಸೂಚನೆಯಂತೆ ಹೊರ ರೋಗಿಗಳ ವಿಭಾಗ ಆರಂಭವಾಗಲಿದೆೆ. ಕೆಲವು ದಿನಗಳ ನಂತರ ತುರ್ತು ಚಿಕಿತ್ಸಾ ವಿಭಾಗವನ್ನೂ ತೆರೆಯಲಾಗುವುದು ಎಂದು ಜಿಲ್ಲಾ ಸರ್ಜನ್ ಕೃಷ್ಣಪ್ರಸಾದ್ ಅವರು ತಿಳಿಸಿದ್ದಾರೆ.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

3 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

4 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

5 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

10 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

17 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

17 hours ago