ಚಾಮರಾಜನಗರ : ನಗರದಲ್ಲಿ ಡಾ.ಪುನೀತ್ ರಾಜ್ ಕುಮಾರ್ ಅವರು ಜೊತೆಗಿರುವ ಗಣೇಶನ ಮೂರ್ತಿ ಒಂದೇ ಒಂದು ಲಭ್ಯವಿದ್ದು ಸಾಕಷ್ಟು ಯುವಕರು ಹಾಗೂ ಸಾರ್ವಜನಿಕರ ಗಮನ ಸೆಳೆಯುತ್ತಿದೆ.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಬಳಿ ಗಣಪತಿ ಮಾರಾಟಕ್ಕಾಗಿ ಹಾಕಿರುವ ಸ್ಟಾಲ್ ನಲ್ಲಿ ವಿವಿಧ ಭಂಗಿಯ ಮಣ್ಣಿನ ಗಣೇಶನ ಮೂರ್ತಿಗಳ ಮಾರಾಟ ಜೋರಾಗಿದ್ದು ಗಣೇಶನ ಜೊತೆಗೆ ಇರುವ ಡಾ.ಪುನೀತ್ ರಾಜ್ ಕುಮಾರ್ ಅವರ ಮೂರ್ತಿ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಸುಮಾರು ೧೧-೧೨ ಸಾವಿರ ರೂಪಾಯಿ ಬೆಲೆಬಾಳುವ ಮೂರ್ತಿಗೆ ಬೇಡಿಕೆ ಹೆಚ್ಚಾಗಿದ್ದು ಸದ್ಯಕ್ಕೆ ಒಂದು ಮಾತ್ರ ಲಭ್ಯವಿದ್ದು ಮಾರಾಟವಾದರೆ ಇಂದು ಸಂಜೆಯೊತ್ತಿಗೆ ಇನ್ನಷ್ಟು ತರಿಸುವ ಯೋಜನೆ ಮಾಡಲಾಗುವುದು ಎಂದು ಮಾರಾಟಗಾರರಾದ ವಿನಯ್ ಕುಮಾರ್ ಅವರು ಆಂದೋಲನಕ್ಕೆ ಮಾಹಿತಿ ನೀಡಿದರು.
ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಚೂರು ವ್ಯಾಪಾರಕ್ಕೆ ತೊಡಕು ಉಂಟಾಯಿತು, ಪುನೀತ್ ಜೊತೆಯಾಗಿರುವ ಗಣೇಶನ ಮೂರ್ತಿಗೆ ಬೇಡಿಕೆ ಹೆಚ್ಚಾಗಿದ್ದು ಮಾರಾಟವಾದ ನಂತರ ಮತ್ತಷ್ಟು ತರಿಸುತ್ತೇವೆ ಎಂದು ಮಾರಾಟಗಾರ ವಿನಯ್ ಕುಮಾರ್ ತಿಳಿಸಿದ್ದಾರೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…