ಚಾಮರಾಜನಗರ: ಭಾರಿ ಮಳೆಯಿಂದಾಗಿ ಗೋಡೆ ಕುಸಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದರ ಮೂಲಕ ಪೂರ್ವ ಪೋಲೀಸ್ ಠಾಣೆಯ ಸಿಬ್ಬಂದಿಗಳು ಮಾನವೀಯತೆ ಮೆರೆದಿದ್ದಾರೆ.
ಚಾ.ನಗರ ತಾಲ್ಲೂಕಿನ ದಡದಹಳ್ಳಿ ಗ್ರಾಮದ ಮೂರ್ತಿ(೩೨) ಎಂಬಾತ ಕೆಲವು ದಿನಗಳ ಹಿಂದೆ ಗೋಡೆ ಕುಸಿದು ಮೃತಪಟ್ಟಿದ್ದರು, ಈ ಸಂದರ್ಭದಲ್ಲಿ ಮೃತ ಮೂರ್ತಿ ಕುಟುಂಬದ ಸಂಕಷ್ಟ ಸ್ಥಿತಿಯನ್ನು ಕಣ್ಣಾರೆ ಕಂಡಿದ್ದ ಚಾ.ನಗರ ಪೂರ್ವ ಪೋಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಎಸ್.ಆನಂದ್ ಅವರು ನೊಂದ ಕುಟುಂಬಕ್ಕೆ ಕಿಂಚಿತ್ತು ಸಹಾಯ ಮಾಡುವ ಯೋಚನೆ ಮಾಡಿದ್ದರು.
ಈ ನಿಟ್ಟಿನಲ್ಲಿ ಸಾಗಿದ ಆನಂದ್ ಅವರು ತಾವು ಹಾಗೂ ಸಹ ಸಿಬ್ಬಂದಿಗಳ ಸಹಕಾರದೊಂದಿಗೆ ಕುಟುಂಬಕ್ಕೆ ಆರ್ಥಿಕವಾಗಿ ನೆರವು ನೀಡುವುದರ ಮೂಲಕ ಪೋಲೀಸರಲ್ಲೂ ಕೂಡ ಮಾನವೀಯತೆ ಇದೆ ಎಂಬುದನ್ನೂ ಸಾಬೀತುಪಡಿಸಿದ್ದಾರೆ. ಅದರಂತೆ ಭಾನುವಾರ ಮೃತ ಕುಟುಂಬಕ್ಕೆ ಪರಿಹಾರ ನೀಡಿ, ಸಾಂತ್ವನದ ಮಾತುಗಳನ್ನಾಡಿ, ಸದಾ ನಿಮ್ಮ ನೆರವಿಗೆ ನಾವು ಇರುತ್ತೇವೆ ಎಂಬ ಭರವಸೆ ನೀಡಿದ್ದಾರೆ.
ಈ ವೇಳೆ ಪೂರ್ವ ಪೋಲೀಸ್ ಠಾಣೆಯ ಸಿಬ್ಬಂದಿಗಳಾದ ಕೃಷ್ಣಮೂರ್ತಿ, ಅಶೋಕ್, ಮಹೇಶ್, ಎಲ್.ಬಸವಣ್ಣ, ಚಂದ್ರು, ಮಹಾದೇವ ಸ್ವಾಮಿ ಹಾಜರಿದ್ದರು.
ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ…
ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ.…
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ…
ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ…
ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು…