ಜಿಲ್ಲೆಗಳು

ರಾಜಕೀಯ ಸ್ಪೂರ್ತಿ ಮೆರೆಯುತ್ತಿರುವ ಸಚಿವ ವಿ ಸೋಮಣ್ಣ

ಹನೂರು : ರಾಜಕೀಯವೆಂದರೆ ಟೀಕೆ, ಟಿಪ್ಪಣಿಗಳು ಸಹಜ, ಬಿಜೆಪಿ ಪಕ್ಷದ ಹಿರಿಯ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರು ಪಕ್ಷ ಭೇದವಿಲ್ಲದೆ ಕಾಂಗ್ರೆಸ್ ಶಾಸಕ ಆರ್ ನರೇಂದ್ರ ರವರ ಪರ ರಾಜಕೀಯ ಸ್ಪೂರ್ತಿ ಮೆರೆದ ಪ್ರಸಂಗ ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಕಂಡು ಬಂತು.

ಡಿಸೆಂಬರ್ 12ರಂದು ಹನೂರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಆಗಮಿಸುತ್ತಿರುವ ಹಿನ್ನೆಲೆ ಅಗತ್ಯ ಸಿದ್ಧತೆಗಳ ಬಗ್ಗೆ ಪರಿಶೀಲ ನಡೆಸಲು ಆಗಮಿಸಿದ್ದ ವೇಳೆ ಪಪಂ ಮಾಜಿ ಸದಸ್ಯ ಬಸವರಾಜ್ ರವರು ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ಸರಿಯಾಗಿ ಆಗುತ್ತಿಲ್ಲ ತಾವು ಹನೂರು ಕ್ಷೇತ್ರಕ್ಕೆ ಬರುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಚಿವ ಪಿ ಸೋಮಣ್ಣ ಪ್ರತಿಕ್ರಿಯಿಸಿ ಹನೂರು ವಿಧಾನಸಭಾ ಕ್ಷೇತ್ರ ಭೌಗೋಳಿಕವಾಗಿ ಬಹು ವಿಸ್ತಾರವನ್ನು ಒಳಗೊಂಡಿದೆ. ಮೂರು ಬಾರಿ ಶಾಸಕರಾಗಿರುವ ಶಾಸಕ ಆರ್ ನರೇಂದ್ರ ಶಕ್ತಿಮೀರಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಕಚೇರಿಗೆ ನೂರಾರು ಬಾರಿ ಬಂದು ಮನವಿ ಸಲ್ಲಿಸಿ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ ಇದು ನನಗಷ್ಟೇ ಗೊತ್ತು ಎಂದು ಶಾಸಕ ಆರ್ ನರೇಂದ್ರ ರವರ ಪರ ಗುಣಗಾನ ಮಾಡಿದರು.

ವಿ.ಸೋಮಣ್ಣ ಕಾರ್ಯ ವೈಖರಿ ಮುತ್ಸಧಿತನಕ್ಕೆ ಪಕ್ಷಾತೀತವಾಗಿ ಪ್ರಶಂಸೆ: ನೇರ ನುಡಿಯ ಹಿರಿಯ ರಾಜಕಾರಣಿ ವಿ. ಸೋಮಣ್ಣ ಅವರ ಪ್ರಭುದ್ದ ರಾಜಕೀಯ ನಡೆಗೆ ಪಕ್ಷಾತೀತವಾಗಿ ಪ್ರಶಂಸೆಗಳ ಮಹಾಪೂರವೇ ಕೇಳಿ ಬರುತ್ತಿದ್ದು, ವಿ.ಸೋಮಣ್ಣ ರಾಜಕೀಯವನ್ನು ಬದಿಗೊತ್ತಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ಶಾಸಕ ಆರ್. ನರೇಂದ್ರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಸೋಮಣ್ಣ ಅವರನ್ನು ಗುಣಗಾನ ಮಾಡುತ್ತಿದ್ದಾರೆ.

ವಿ. ಸೋಮಣ್ಣ ಕೃಪಾಕಟಾಕ್ಷದಿಂದ ಅಭಿವೃದ್ಧಿಯತ್ತ ಹನೂರು : ಶಾಸಕ ಆರ್.ನರೇಂದ್ರ ಅವರ ಅವಿರತ ಶ್ರಮದಿಂದ ಇಲ್ಲಿಯವರೆಗೆ ಆಗಿರುವ ಅಭಿವೃದ್ಧಿ ಕಾರ್ಯಗಳ ಜೊತೆಗೆ ಸಚಿವ ವಿ. ಸೋಮಣ್ಣ ಉಸ್ತುವಾರಿ ಸಚಿವರಾಗಿ ಹಾಗೂ ಮುಖ್ಯಮಂತ್ರಿಗಳು ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನೂರಾರು ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ ಮಾಡಿಸುತ್ತಿರುವುದು ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿದೆ. ಮುಖ್ಯಮಂತ್ರಿ ಕ್ಷೇತ್ರಕ್ಕೆ ಬರುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಗಳನ್ನು ಘೋಷಿಸಲು ಸಚಿವ ವಿ. ಸೋಮಣ್ಣ ಶ್ರಮಿಸುತ್ತಿದ್ದಾರೆ ಎನ್ನಲಾಗಿದೆ. ಒಟ್ಟಾರೆ ವಿ.ಸೋಮಣ್ಣ ಅವರ ನೇತೃತ್ವದಲ್ಲಿ ನೆನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ನೂತನ ಅಭಿವೃದ್ಧಿ ಕಾರ್ಯಗಳಿಗೆ ಮುನ್ನುಡಿಯಾಗಿದೆ. ಹನೂರು ವಿಧಾನಸಭಾ ಕ್ಷೇತ್ರ ಈ ರೂಪದಲ್ಲಾದರೂ ಅಭಿವೃದ್ಧಿಯತ್ತ ಸಾಗುತ್ತಿರುವುದು ಸಂತಸದಾಯಕ ವಿಚಾರವಾಗಿದೆ ಎಂಬುದು ಸಾರ್ವಜನಿಕ ವಲಯದಲ್ಲಿ ವಿ. ಸೋಮಣ್ಣ ಅವರ ಮೇಲಿನ ಪ್ರಶಂಸೆಗೆ ಕಾರಣವಾಗಿದೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago