Mysore
18
few clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಚಾ.ನಗರ : ಸಾಲೂರು ಬೃಹನ್ಮಠಕ್ಕೆ ಜಿಲ್ಲಾಧಿಕಾರಿ ಭೇಟಿ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾದ ಡಿ ಎಸ್ ರಮೇಶ್ ರವರು ಇಂದು ಸಾಲೂರು ಬೃಹನ್ಮಠಕ್ಕೆ ಭೇಟಿ ನೀಡಿ ಪೀಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ತಹಸೀಲ್ದಾರ್ ಆನಂದಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು

ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ ಬೆನ್ನಲ್ಲೇ, ನೂತನ ಜಿಲ್ಲಾಧಿಕಾರಿಯಾಗಿ ಡಿ. ಎಸ್. ರಮೇಶ್ ಅವರನ್ನು ನೇಮಕ ಮಾಡಲಾಗಿದೆ.
ಡಿ.ಎಸ್. ರಮೇಶ್ ಪ್ರಸ್ತುತ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಯಿತು.. ರಮೇಶ್ ಅವರು 2010ನೇ ಬ್ಯಾಚಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಯಾಗಿದ್ದಾರೆ. ಇವರು ಕಳೆದ ಅ.31 ರಂದು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ  ಅಧಿಕಾರ ಸ್ವೀಕಾರ ಮಾಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!