ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾದ ಡಿ ಎಸ್ ರಮೇಶ್ ರವರು ಇಂದು ಸಾಲೂರು ಬೃಹನ್ಮಠಕ್ಕೆ ಭೇಟಿ ನೀಡಿ ಪೀಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ತಹಸೀಲ್ದಾರ್ ಆನಂದಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ ಬೆನ್ನಲ್ಲೇ, ನೂತನ ಜಿಲ್ಲಾಧಿಕಾರಿಯಾಗಿ ಡಿ. ಎಸ್. ರಮೇಶ್ ಅವರನ್ನು ನೇಮಕ ಮಾಡಲಾಗಿದೆ.
ಡಿ.ಎಸ್. ರಮೇಶ್ ಪ್ರಸ್ತುತ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಯಿತು.. ರಮೇಶ್ ಅವರು 2010ನೇ ಬ್ಯಾಚಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಯಾಗಿದ್ದಾರೆ. ಇವರು ಕಳೆದ ಅ.31 ರಂದು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಮಂಡ್ಯ: ಚಲಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದು ಚಾಲಕನ ಕಣ್ಣಿಗೆ ಕಾರದ ಪುಡಿ ಎರಚಿ ನಗದು ದರೋಡೆ ಮಾಡಿರುವ ಘಟನೆ ಮಂಡ್ಯ…
ಹೈದರಾಬಾದ್: ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್‌ಗೆ ನೋಟಿಸ್ ನೀಡಲಾಗಿದೆ. ನಾಳೆ ಬೆಳಿಗ್ಗೆ 11…
ಬೆಂಗಳೂರು: ನಟ ಯಶ್ ಹಾಗೂ ಪತ್ನಿ ರಾಧಿಕಾ ಪಂಡಿತ್ ಅವರಿಂದು ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ…
ಮುಂಬೈ: ಬಾಲಿವುಡ್‌ನ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರಿಂದು ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ತಿಂಗಳುಗಳಿಂದ…
ಜೈಪುರ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರು ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದ…
ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…