ಚಾಮರಾಜನಗರ: ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ನಡೆಸಲಾದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಜೆ. ಅಗ್ನೀಶ್ ಸಾರಾ ಎಂಬ ವಿದ್ಯಾರ್ಥಿನಿ ಜಿಲ್ಲಾಧಿಕಾರಿ ಜೊತೆ ಒಂದಿಡಿ ದಿನ ಇರುವ ವಿಶೇಷ ಅವಕಾಶ ಪಡೆದಿದ್ದಾರೆ.
ಅಗ್ನೀಶ್ ಸಾರಾ ಎಂಬ ವಿದ್ಯಾರ್ಥಿನಿ ಕೊಳ್ಳೆಗಾಲದ ಜೆ.ಎಸ್.ಎಸ್. ಮಹಿಳಾ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದು, ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ ಎಂಬ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದರು. ಇಂದು ಬೆಳಗ್ಗೆ 10.30ಕ್ಕೆ ಡಿಸಿ ಚಾರುಲತಾ ಸೋಮಲ್ ಅವರು ಸಾರಾ ಅವರನ್ನು ಬರಮಾಡಿಕೊಂಡರು.
ಜಿಲ್ಲಾಧಿಕಾರಿ ಜೊತೆ ಬೆಳಗ್ಗೆಯಿಂದ ಸಂಜೆವರೆಗೂ ಇದ್ದು, ದಿನದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ. ಜಿಲ್ಲಾ ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಕಳೆದ ಜುಲೈ ತಿಂಗಳಲ್ಲಿ ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ನಡೆಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಜೆ. ಅಗ್ನೀಶ್ ಸಾರಾ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರು
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಪಕ್ಕದ ಕುರ್ಚಿಯಲ್ಲೇ ಕುಳಿತು ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ಸಾರಾ ಎಲ್ಲವನ್ನೂ ನೋಟ್ ಮಾಡಿಕೊಳ್ಳುತ್ತಿದ್ದರು, ಜಿಲ್ಲಾಧಿಕಾರಿ ಅವರ ಕಾರ್ಯವೈಖರಿ ಹೇಗಿರುತ್ತೆ ಎಂಬುದನ್ನು ಗಮನಿಸುತ್ತಿದ್ದಾರೆ.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…