Mysore
21
overcast clouds
Light
Dark

ಚಾ.ನಗರ : ಭಾರಿ ವಾಹನಗಳ ಸಂಚಾರ ನಿರ್ಬಂಧ

ಚಾಮರಾಜನಗರ: ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ ೬ ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ ೯ ರಿಂದ ಬೆಳಗ್ಗೆ ೬ ಗಂಟೆಯವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು, ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಅಗತ್ಯ ವಸ್ತುಗಳ ಸಾಗಾಣಿಕೆ ವಾಹನಗಳು, ಅಗ್ನಿಶಾಮಕ ವಾಹನ, ಅಂಬುಲೆನ್ಸ್ ವಾಹನ, ರಾಜ್ಯ ಹಾಗೂ ಹೊರರಾಜ್ಯದ ಸಾರ್ವಜನಿಕ ವಾಹನಗಳಾದ ಸರ್ಕಾರಿ, ಖಾಸಗಿ ಬಸ್‌ಗಳು, ಸರ್ಕಾರಿ ಇತರೆ ಎಲ್ಲಾ ರೀತಿಯ ಲಘು ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.
ರಾಷ್ಟಿçÃಯ ಹೆದ್ದಾರಿ ೨೦೯ರಲ್ಲಿ ರಾತ್ರಿ ಸಂಚಾರ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ರಾತ್ರಿ ವೇಳೆಯಲ್ಲಿ ಎಲ್ಲಾ ಮಾದರಿಯ ವಾಹನಗಳು ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಸಂಚರಿಸುವೆ.
ಈ ಹಿನ್ನೆಲೆಯಲ್ಲಿ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ ಮತ್ತು ಮಲೆ ಮಹದೇಶ್ವರ ಬೆಟ್ಟದಿಂದ ಪಾಲಾರ್‌ವರೆಗಿನ ರಸ್ತೆಯು ಕಡಿದಾದ ತಿರುವಿನಿಂದ ಕೂಡಿದ್ದು ಹಾಗೂ ಚಿಕ್ಕದಾಗಿರುವುದರಿಂದ ಭಾರೀ ವಾಹನಗಳ ಸಂಚಾರದಿAದ ರಸ್ತೆಯಲ್ಲಿ ಸಂಚಾರ ದಟ್ಟಣೆಯಾಗಿದೆ.
ಇದರಿಂದ ಶ್ರೀ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾಧಿಗಳ, ಸಾರ್ವಜನಿಕರ, ಸರ್ಕಾರದ ಹಾಗೂ ತುರ್ತು ವಾಹನಗಳ ಸುಗಮ ಸಂಚಾರವು ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ ೧೯೮೮ರ ಸೆಕ್ಷನ್ ೧೧೫, ಕರ್ನಾಟಕ ಮೊಟಾರು ವಾಹನಗಳ ನಿಯಾಮಾವಳಿ-೧೯೮೯ರ ನಿಯಮ ೨೨೧-ಎ(೫)ರ ಹಾಗೂ ಕರ್ನಾಟಕ ಸಂಚಾರ ನಿಯಂತ್ರಣ ಕಾಯ್ದೆ ೧೯೬೦ರ ಸೆಕ್ಷನ್ ೩ರ ಪ್ರಕಾರ ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ ೬ಕ್ಕಿಂತ ಹೆಚ್ಚಿನ ಚಕ್ರಗಳನ್ನು ಹೊಂದಿರುವ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
೬ ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ ೯ ಗಂಟೆಯಿAದ ಬೆಳಿಗ್ಗೆ ೬ ಗಂಟೆಯವರೆಗೆ ನಿರ್ಬಂಧಿಸಿದೆ ಎಂದು ತಿಳಿಸಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ