Light
Dark

ಚಾ.ನಗರ : ಮಾದಪ್ಪನ ಹುಂಡಿಯಲ್ಲಿ 2 ಕೋಟಿ 16 ಸಾವಿರ ಸಂಗ್ರಹ

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಂಗಳವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.16 ಕೋಟಿ ರೂ ಸಂಗ್ರಹವಾಗಿದೆ.

ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಿಗ್ಗೆ ಸಾಲೂರು ಬೃಹನ್ಮಠಾಧ್ಯಕ್ಷ ವಿದ್ವಾನ್ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು ಎಣಿಕೆ ಕಾರ್ಯವು ಸಂಜೆ 7 ಗಂಟೆಯ ವರೆಗೂ ನಡೆಯಿತು.

ಈ ಬಾರಿ ಅಮಾವಾಸ್ಯೆ ಹಾಗೂ ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು ಕಳೆದ 40 ದಿನಗಳ ಅವಧಿಯಲ್ಲಿ 2 ಕೋಟಿ 16 ಸಾವಿರದ 340 ರೂ 50 ಗ್ರಾಂ ಚಿನ್ನ ಹಾಗೂ 2.342 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

ಶ್ರೀ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪಕಾರ್ಯದರ್ಶಿ ಬಸವರಾಜು,ಲೆಕ್ಕಾಧೀಕ್ಷಕ ಪ್ರವೀಣ್ ಪಾಟೀಲ್ ದ್ವಿತೀಯ ದರ್ಜೆ ಸಹಾಯಕ ಮಹದೇವಸ್ವಾಮಿ ಸಿಬ್ಬಂದಿಗಳಾದ ಜನಾರ್ದನ್, ಮಲ್ಲಿಕಾರ್ಜುನಪ್ಪ, ನಾಗರಾಜು, ಮಾದೇಶ್ , ಎಸ್ ಬಿಐ ಬ್ಯಾಂಕ್ ನೌಕರರು ಸೇರಿದಂತೆ ಇನ್ನಿತರರು ಹಾಜರಿದ್ದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ