ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ತೋಟಗಾರಿಕೆ ಇಲಾಖೆ ಹಾಗೂ ತೋಟಗಾರಿಕೆ ಸಂಘದ ಸಹಯೋಗದಲ್ಲಿ ಜನವರಿ 26 ರಿಂದ 30 ರವರೆಗೆ 5 ದಿನಗಳ ಕಾಲ ತೋಟಗಾರಿಕೆ ಇಲಾಖೆ ಕಛೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಫಲಪುಷ್ಪ ಪ್ರದರ್ಶನವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಉದ್ಘಾಟಿಸಿದರು.ಫಲಪುಷ್ಪ ಪ್ರದರ್ಶನದ ಆಕರ್ಷಣೀಯ ಪ್ರದರ್ಶನವನ್ನು ಕಂಡ ಸಚಿವರು ಸಂತಸ ವ್ಯಕ್ತಪಡಿಸಿದರು.
ಮಹಾತ್ಮ ಗಾಂಧೀಜಿ, ರಾಮಮಂದಿರದ ವಿನ್ಯಾಸ, ರಾಮಬಂಟ ಹನುಮ, ಚಂದ್ರಯಾನ-3, ಜ್ಞಾನಪೀಠ ಪುರಸ್ಕೃತರ ಚಿತ್ರಗಳು, ಸಿರಿಧಾನ್ಯದಲ್ಲಿ ನಿರ್ಮಿಸಿರುವ ಮಂಡ್ಯ ನಿತ್ಯ ಸಚಿವ ಕೆ.ವಿ ಶಂಕರೇಗೌಡ ಅವರ ಕಲಾಕೃತಿ ಸೇರಿದಂತೆ ವೈವಿಧ್ಯಮಯ ಅಲಂಕಾರಿಕ ಹೂಕುಂಡಗಳನ್ನು ವೀಕ್ಷಿಸಿದರು.
ಅರಣ್ಯ ಇಲಾಖೆಯ ಪಕ್ಷಿಧಾಮ, ಕೃಷಿ ಇಲಾಖೆಯ ಸುಗ್ಗಿ ಹಬ್ಬ, 20 ಸಾವಿರಕ್ಕೂ ಹೆಚ್ಚು ಹೂ ಬಳಸಿ ನಿರ್ಮಿಸಿರುವ ಕಲಕೃತಿಗಳು, ಹೂಕುಂಡುಗಳು ಸಸ್ಯಕಾಶಿ ಮಾದರಿಯಲ್ಲಿ ಸೂರ್ಯನಿಗೆ ಮೈಯೊಡ್ಡಿ ನಿಂತಿವೆ. ನಾಡಿನ ಅನ್ನದಾತನ ಮಾದರಿ, ಎತ್ತಿನಗಾಡಿ, ಹಸು, ರೈತನ ಮಾದರಿಗಳು ಎಲ್ಲರ ಗಮನ ಸೆಳೆಯುತ್ತಿವೆ.
ಜನ ಸಾಮಾನ್ಯರು, ಪರಿಶಿಷ್ಟರ ಜಾತಿ/ವರ್ಗದ ಹಾಗೂ ಹಿಂದುಳಿದ ವರ್ಗಗಳ ಕನಿಷ್ಠ ಅವಶ್ಯಕತೆಗಳನ್ನು ಪೂರೈಸುವ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಐದು ಗ್ಯಾರಂಟಿಗಳ ಪ್ರಾತ್ಯಕ್ಷಿಕೆ ವಿನೂತನ ಮಾದರಿಯಲ್ಲಿದ್ದು ಜನ ಸಾಮಾನ್ಯರು ಅದರ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿ ಗಮನ ಸೆಳೆಯುತ್ತಿದ್ದಾರೆ.
ವಿವಿಧ ಇಲಾಖೆಗಳು ಜನ ಸಮಾನ್ಯರಿಗೆ ನೀಡುವ ಸೌಲಭ್ಯಗಳ ಬಗ್ಗೆ ವಸ್ತುಪ್ರದರ್ಶನ ಮಳಿಗೆಗಳು ಅನಾವರಣಗೊಳಿಸಲಾಗಿತ್ತು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಮುಖ್ಯ ಕಾರ್ಯ ನಿರ್ವಾಹಕ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾಧಿಕಾರಿ ಡಾ. ಎಚ್. ಎಲ್. ನಾಗರಾಜು, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಬಿರಾದರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ರೂಪಶ್ರೀ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…
ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…
ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…
ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…