ಜಿಲ್ಲೆಗಳು

ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ತೋಟಗಾರಿಕೆ ಇಲಾಖೆ ಹಾಗೂ ತೋಟಗಾರಿಕೆ ಸಂಘದ ಸಹಯೋಗದಲ್ಲಿ ಜನವರಿ 26 ರಿಂದ 30 ರವರೆಗೆ 5 ದಿನಗಳ ಕಾಲ ತೋಟಗಾರಿಕೆ ಇಲಾಖೆ ಕಛೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಫಲಪುಷ್ಪ ಪ್ರದರ್ಶನವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಉದ್ಘಾಟಿಸಿದರು.ಫಲಪುಷ್ಪ ಪ್ರದರ್ಶನದ ಆಕರ್ಷಣೀಯ ಪ್ರದರ್ಶನವನ್ನು ಕಂಡ ಸಚಿವರು  ಸಂತಸ ವ್ಯಕ್ತಪಡಿಸಿದರು.

ಮಹಾತ್ಮ ಗಾಂಧೀಜಿ, ರಾಮಮಂದಿರದ ವಿನ್ಯಾಸ, ರಾಮಬಂಟ ಹನುಮ, ಚಂದ್ರಯಾನ-3, ಜ್ಞಾನಪೀಠ ಪುರಸ್ಕೃತರ ಚಿತ್ರಗಳು, ಸಿರಿಧಾನ್ಯದಲ್ಲಿ ನಿರ್ಮಿಸಿರುವ ಮಂಡ್ಯ ‌ನಿತ್ಯ ಸಚಿವ ಕೆ.ವಿ ಶಂಕರೇಗೌಡ ಅವರ ಕಲಾಕೃತಿ ಸೇರಿದಂತೆ ವೈವಿಧ್ಯಮಯ ಅಲಂಕಾರಿಕ ಹೂಕುಂಡಗಳನ್ನು ವೀಕ್ಷಿಸಿದರು.

ಅರಣ್ಯ ಇಲಾಖೆಯ ಪಕ್ಷಿಧಾಮ, ಕೃಷಿ ಇಲಾಖೆಯ ಸುಗ್ಗಿ ಹಬ್ಬ, 20 ಸಾವಿರಕ್ಕೂ ಹೆಚ್ಚು ಹೂ ಬಳಸಿ ನಿರ್ಮಿಸಿರುವ ಕಲಕೃತಿಗಳು, ಹೂಕುಂಡುಗಳು ಸಸ್ಯಕಾಶಿ ಮಾದರಿಯಲ್ಲಿ ಸೂರ್ಯನಿಗೆ ಮೈಯೊಡ್ಡಿ ನಿಂತಿವೆ. ನಾಡಿನ ಅನ್ನದಾತನ ಮಾದರಿ, ಎತ್ತಿನಗಾಡಿ, ಹಸು, ರೈತನ ಮಾದರಿಗಳು ಎಲ್ಲರ ಗಮನ ಸೆಳೆಯುತ್ತಿವೆ‌.

ಜನ ಸಾಮಾನ್ಯರು, ಪರಿಶಿಷ್ಟರ‌ ಜಾತಿ/ವರ್ಗದ ಹಾಗೂ ಹಿಂದುಳಿದ ವರ್ಗಗಳ ಕನಿಷ್ಠ ಅವಶ್ಯಕತೆಗಳನ್ನು ಪೂರೈಸುವ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಐದು ಗ್ಯಾರಂಟಿಗಳ ಪ್ರಾತ್ಯಕ್ಷಿಕೆ ವಿನೂತನ ಮಾದರಿಯಲ್ಲಿದ್ದು ಜನ ಸಾಮಾನ್ಯರು ಅದರ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿ ಗಮನ ಸೆಳೆಯುತ್ತಿದ್ದಾರೆ.
ವಿವಿಧ ಇಲಾಖೆಗಳು ಜನ ಸಮಾನ್ಯರಿಗೆ ನೀಡುವ ಸೌಲಭ್ಯಗಳ ಬಗ್ಗೆ ವಸ್ತುಪ್ರದರ್ಶನ ಮಳಿಗೆಗಳು ಅನಾವರಣಗೊಳಿಸಲಾಗಿತ್ತು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಮುಖ್ಯ ಕಾರ್ಯ ನಿರ್ವಾಹಕ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾಧಿಕಾರಿ ಡಾ. ಎಚ್. ಎಲ್. ನಾಗರಾಜು, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಬಿರಾದರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ರೂಪಶ್ರೀ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

andolana

Recent Posts

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

4 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

4 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

4 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

4 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

4 hours ago

ಸಕ್ಕರೆ ನಾಡಿನಲ್ಲಿ ಬರದಿಂದ ಕಂಗಾಲಾದ ರೈತರು

ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…

4 hours ago