ಚಾಮರಾಜನಗರ : ನಗರದ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಹೆಚ್.ಆರ್ ಮಹೇಶ್ ಎಂಬುವವರು ಸಾವಿಗೆ ಯತ್ನಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್ ಅವರನ್ನು ಹನೂರು ಠಾಣೆಗೆ ವರ್ಗಾವಣೆ ಮಾಡಿ ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿಗಳು ವರ್ಗಾವಣೆ ಮಾಡಿದ್ದರು. ಜತೆಗೆ, ಇತರ ಠಾಣೆಗಳ 7 ಮಂದಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು.ವರ್ಗಾವಣೆಯಿಂದ ಮನನೊಂದು ಈ ಯತ್ನ ಮಾಡಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.
ಸಾವಿಗೆ ಯತ್ನಿಸಿದ ಮಹೇಶ್ ರವರ ಕೈ- ಕಾಲು, ಪಕ್ಕೆಲುಬುಗಳಲ್ಲಿ ಸುಟ್ಟಗಾಯಗಳಾಗಿದ್ದು ಸದ್ಯ ಅವರನ್ನು ಚಿಕಿತ್ಸೆಗಾಗಿ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಮಾತನಾಡಿರುವ ಎಸ್ಪಿ ಶಿವಕುಮಾರ್ ರವರು ಮಹೇಶ್ ರವರು ಯಾವ ಕಾರಣಕ್ಕಾಗಿ ಸಾವಿಗೆ ಯತ್ನಿಸಿದ್ದಾರೆಂಬುದರ ಬಗ್ಗೆ ತಿಳಿದಿಲ್ಲ, ಪರಿಶೀಲನೆ ನಡೆಸಲಾಗುವುದು ಎಂದಿದ್ದಾರೆ.
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…
ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…
ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…
ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…