ಚಾಮರಾಜನಗರ

ಸಾಲೂರು ಶ್ರೀ ರಚಿಸಿದ್ದ ಮಹಾಪ್ರಬಂಧಕ್ಕೆ ಸಂಸ್ಕೃತ ಗ್ರಂಥ ಪುರಸ್ಕಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಪಿಎಚ್.ಡಿ ಮಹಾಪ್ರಬಂಧಕ್ಕೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ 2024ನೇ ಸಾಲಿನ ಸಂಸ್ಕೃತ ಗ್ರಂಥ ಪುರಸ್ಕಾರ ಲಭಿಸಿದೆ.

ಶ್ರೀಗಳು ಪ್ರತಿಪಾದಿಸಿರುವ ಅಂಶುಮದಾಗಮ ಸಂಪದನಾತ್ಮಕಮಧ್ಯಯನಮ್’ ಸಂಶೋಧನಾ ಪ್ರಬಂಧಕ್ಕೆ ಕುಂದೂರು ಮಠದ ಪೀಠಾಧಿಪತಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ವಿದ್ವಾನ್ ಡಾ.ಶರತ್‌ಚಂದ್ರ ಸ್ವಾಮೀಜಿ ಮಾರ್ಗದರ್ಶನ ಮಾಡಿದ್ದರು. ಈ ಮಹಾಪ್ರಬಂಧದಲ್ಲಿ 84 ಅಧ್ಯಾಯಗಳಿದ್ದು, ಪರಿಪೂರ್ಣವಾಗಿ ದೇಗುಲ, ಪೂಜಾದಿ ಆರಂಭ, ಸಕಲ ಸ್ಥಾಪನ, ಅತ್ಯಾರ್ಥಯಜನ ಪವಿತ್ರ ವಿಧಿ, ಪಂಚಾಮೃತ ವಿಧಿ, ಚೂರ್ಣೋತ್ಸವ ವಿಧಿ, ಪರಸುಪಯ ವಿಧಿ, ಪಾದ್ಯಾದಿವಿಧಿಗಳನ್ನು ಸುವಿಸ್ತಾರವಾಗಿ ವರ್ಣಿತವಾಗಿವೆ. ವಿವಿಧ ದೇವತೆಗಳಿಗೆ ಸಂಬಂಧಿಸಿದ ಅರ್ಚನಾ ಕ್ರಮಗಳ ವಿವರಗಳಿವೆ.

ವಿನಾಯಕ ವ್ರತ, ಮುಖಲಿಂಗಾರ್ಚನ, ಗೌರೀಪವಿತ್ರ ವಿಧಿ, ನಕ್ಷತ್ರ ಪೂಜಾ ವಿಧಿ, ಅರ್ಧನಾರೀಶ್ವರ ಪೂಜಾ ವಿಧಿ, ಚಂದೇಕಾರ್ಚನ ವಿಧಿ ಮಹಾಶಾಂತಿ ವಿಧಿ, ದೇವೀಪೂಜಾ ವಿಧಿ ಇದೆ. ಈ ಅಗಮದಲ್ಲಿ ದೇಗುಲಗಳ ನಿರ್ಮಾಣ, ಮೂರ್ತಿ ನಿರ್ಮಾಣದ ವಿಧಾನ, ಸೇನಾಸ್ತಂಭ, ಅಶ್ವಸ್ತಂಭಗಳ ಸ್ಥಾಪನೆ ಇತ್ಯಾದಿ ವಿವರಗಳಿವೆ. ಜತೆಗೆ ರುದ್ರಾಕ್ರ ಭಸ್ಮಾದಿ ವಿಧಿಗಳು, ಕೃತ್ತಿಕಾದೀಪ ವಿಧಿ, ವಿವಿಧ ಪ್ರಾಯಶ್ಚಿತ್ರಗಳು, ಪ್ರದೋಷ, ಪೂಜಾದಿ ವಿಧಿಗಳನ್ನು ವಿವರಿಸಲಾಗಿದೆ. ದೇಗುಲಗಳ ವಿವಿಧ ಕರ್ಮ ವಿಧಾನ, ಶೈವ ದೇಗುಲಗಳ ವಿಧಿವಿಧಾನಗಳ ಬಗ್ಗೆ ಅಧ್ಯಯನ ಮಾಡುವ ಸಂಶೋಧಕರಿಗೆ ಇದು ನೆರವಾಗಲಿದೆ.

ಆಂದೋಲನ ಡೆಸ್ಕ್

Recent Posts

ಕೆನಡಾದಲ್ಲಿ ಕನ್ನಡಿಗನ ಹತ್ಯೆ ಪ್ರಕರಣ: ಆರೋಪಿ ಭಾವಚಿತ್ರ ಬಿಡುಗಡೆ

ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…

1 hour ago

ಕೊಡಗು ಜಿಲ್ಲೆಯಲ್ಲಿ ಏಪ್ರಿಲ್.‌8ರಿಂದ ಪಾಸ್‌ಪೋರ್ಟ್‌ ಮೇಳ: ಸಂಸದ ಯದುವೀರ್‌ ಒಡೆಯರ್‌ ಮಾಹಿತಿ

ಕೊಡಗು: ಸಂಸದ ಯದುವೀರ್‌ ಕೃಷ್ಣದತತ ಚಾಮರಾಜ ಒಡೆಯರ್‌ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ…

2 hours ago

ಇರಾನ್‌ ಸರ್ವೋಚ್ಛ ನಾಯಕನಾಗಿ ಅಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಬಾ ಖಮೇನಿ ಆಯ್ಕೆ.?

ಟೆಹರಾನ್:‌ ಇರಾನ್‌ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್‌ನ ಮುಂದಿನ ಸರ್ವೋಚ್ಛ…

2 hours ago

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಿಗ್‌ ಬಜೆಟ್‌ ಸಿನಿಮಾ ಟಾಕ್ಸಿಕ್‌ ಇರಾನ್-‌ ಇಸ್ರೇಲ್‌ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.‌19ರಂದು ಬಿಡುಗಡೆಯಾಗಬೇಕಿದ್ದ…

2 hours ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ವಿಶೇಷ: ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಕಂಬ ಪ್ರತಿಷ್ಠಾಪನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…

3 hours ago

ಹನೂರು| ಚಂಗಡಿ ಗ್ರಾಮದ ಸುತ್ತಮುತ್ತ ಪ್ರತಿನಿತ್ಯ ಹುಲಿ ಓಡಾಟ: ಆತಂಕದಲ್ಲಿ ಸ್ಥಳೀಯರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…

3 hours ago