ಚಾಮರಾಜನಗರ

ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ: 1.76 ಕೋಟಿ ಸಂಗ್ರಹ

ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ( ಆಗಸ್ಟ್‌ 29 ) ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 1.76 ಕೋಟಿ ರೂ. ಸಂಗ್ರಹವಾಗಿದೆ.

ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 4:30 ಗಂಟೆಯವರೆಗೂ ನಡೆಯಿತು.

ಭೀಮನ ಅಮಾವಾಸ್ಯೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 1,76,29,849 ನಗದು, 45 ಗ್ರಾಂ ಚಿನ್ನ ಹಾಗೂ 1.300 ಗ್ರಾಂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಇದಲ್ಲದೆ ಇ ಹುಂಡಿಯಿಂದ 2,96,469 ರೂ, ಯುಎಸ್ 20 ಡಾಲರ್, ಥಾಯ್ಲ್ಯಾಂಡ್ 1, ಶ್ರೀಲಂಕಾ 2, ಅರಬ್‌ನ 3 ನೋಟು ಸೇರಿದಂತೆ ಇತರ ದೇಶಗಳ ನೋಟುಗಳು ಇದಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 11 ನೋಟುಗಳನ್ನು ಹುಂಡಿಯಲ್ಲಿ ಹಾಕಿದ್ದಾರೆ.

ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಾ ಅಧೀಕ್ಷಕ ನಾಗೇಶ್, ಜಿಲ್ಲಾಡಳಿತ ಕಚೇರಿ ಮುಜರಾಯಿ ಶಾಖೆಯ ಭಾರತಿ, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

3 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

4 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

5 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

5 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

6 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

7 hours ago