ಎಚ್.ಡಿ ಕೋಟೆ : ಹೆಚ್ಚುತ್ತಿರುವ ಮಾನವ ಮತ್ತು ವನ್ಯಜೀವಿ ಸಂಘರ್ಷ ಹಿನ್ನೆಲೆ ದೇಶದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಫಾರಿಯ ಟ್ರಿಪ್ ಅನ್ನು ಕಡಿತಗೊಳಿಸಿ ಆದೇಶಿಸಲಾಗಿದೆ. ವನ್ಯಜೀವಿ ಸಂಘರ್ಷ ಹೆಚ್ಚಳ ಹಾಗೂ ರೈತ ಸಂಘಟನೆಗಳ ಒತ್ತಾಯದ ಹಿನ್ನೆಲೆಯಲ್ಲಿ ಬಂಡೀಪುರ ಸಫಾರಿಯಲ್ಲಿ ಕೊನೆಯ 1 ಟ್ರಿಪ್ ಅನ್ನು ಕಡಿತಗೊಳಿಸಿ ಅರಣ್ಯ ಸಚಿವ ಈಶ್ವರ ಖಂಡ್ರೆ ಮಹತ್ವದ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:-ಎಸ್‌ಸಿ ಒಳ ಮೀಸಲಾತಿ ಸಂಬಂಧ ಮಹತ್ವದ ನಿರ್ಧಾರ : ಇಲ್ಲಿವೆ ಸಭೆಯ ಮುಖ್ಯಾಂಶಗಳು
ಆದೇಶದಲ್ಲಿ ಏನಿದೆ?
ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವನ್ಯಜೀವಿಗಳ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಫಾರಿಯ ಟ್ರಿಪ್ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ರಾತ್ರಿ 6 ಗಂಟೆ ನಂತರವೂ ಕಾಡಿನಲ್ಲಿ ಸಫಾರಿ ವಾಹನಗಳು ಸಂಚರಿಸುತ್ತಿವೆ. ವಾಹನದ ಬೆಳಕು ಮತ್ತು ಶಬ್ಧದಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬಂದು ಉಪಟಳ ನೀಡುತ್ತಿವೆ ಎಂದು ವಿವಿಧ ರೈತ ಸಂಘಟನೆಗಳು ಆರೋಪಿಸಿದ್ದಲ್ಲದೇ ಕೂಡಲೇ ಸಫಾರಿ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ಆದರೆ, ಸಫಾರಿಯು ಕಾಡಿನ ಬಗ್ಗೆ, ವನ್ಯಜೀವಿಗಳ ಬಗ್ಗೆ ಪರಿಸರ ಆಸಕ್ತರಿಗೆ ಶಿಕ್ಷಣವೂ ಆಗಿದೆ. ಹಲವರಿಗೆ ಜೀವನೋಪಾಯವೂ ಆಗಿದೆ. ಈ ಹಿನ್ನೆಲೆಯಲ್ಲಿ ಅ.28ರಿಂದಲೇ ಹಾಲಿ ಇರುವ ಸಫಾರಿಯ ಟ್ರಿಪ್ಗಳ ಪೈಕಿ 1 ಟ್ರಿಪ್ ಅನ್ನು ಕಡಿತಗೊಳಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಈ ಮೂಲಕ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…
ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…
ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…
ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…
ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…