ಚಾಮರಾಜನಗರ

ಇನ್ಮುಂದೆ ಬಂಡೀಪುರ ಸಫಾರಿಯಲ್ಲಿ 1 ಟ್ರಿಪ್‌ ಕಡಿತ ; ಅರಣ್ಯ ಇಲಾಖೆ ಮಹತ್ವದ ಆದೇಶ

ಎಚ್‌.ಡಿ ಕೋಟೆ : ಹೆಚ್ಚುತ್ತಿರುವ ಮಾನವ ಮತ್ತು ವನ್ಯಜೀವಿ ಸಂಘರ್ಷ ಹಿನ್ನೆಲೆ ದೇಶದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಫಾರಿಯ ಟ್ರಿಪ್ ಅನ್ನು ಕಡಿತಗೊಳಿಸಿ ಆದೇಶಿಸಲಾಗಿದೆ. ವನ್ಯಜೀವಿ ಸಂಘರ್ಷ ಹೆಚ್ಚಳ ಹಾಗೂ ರೈತ ಸಂಘಟನೆಗಳ ಒತ್ತಾಯದ ಹಿನ್ನೆಲೆಯಲ್ಲಿ ಬಂಡೀಪುರ ಸಫಾರಿಯಲ್ಲಿ ಕೊನೆಯ 1 ಟ್ರಿಪ್ ಅನ್ನು ಕಡಿತಗೊಳಿಸಿ ಅರಣ್ಯ ಸಚಿವ ಈಶ್ವರ ಖಂಡ್ರೆ ಮಹತ್ವದ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ:-ಎಸ್‌ಸಿ ಒಳ ಮೀಸಲಾತಿ ಸಂಬಂಧ ಮಹತ್ವದ ನಿರ್ಧಾರ : ಇಲ್ಲಿವೆ ಸಭೆಯ ಮುಖ್ಯಾಂಶಗಳು

ಆದೇಶದಲ್ಲಿ ಏನಿದೆ?
ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವನ್ಯಜೀವಿಗಳ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಫಾರಿಯ ಟ್ರಿಪ್ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ರಾತ್ರಿ 6 ಗಂಟೆ ನಂತರವೂ ಕಾಡಿನಲ್ಲಿ ಸಫಾರಿ ವಾಹನಗಳು ಸಂಚರಿಸುತ್ತಿವೆ. ವಾಹನದ ಬೆಳಕು ಮತ್ತು ಶಬ್ಧದಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬಂದು ಉಪಟಳ ನೀಡುತ್ತಿವೆ ಎಂದು ವಿವಿಧ ರೈತ ಸಂಘಟನೆಗಳು ಆರೋಪಿಸಿದ್ದಲ್ಲದೇ ಕೂಡಲೇ ಸಫಾರಿ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ಆದರೆ, ಸಫಾರಿಯು ಕಾಡಿನ ಬಗ್ಗೆ, ವನ್ಯಜೀವಿಗಳ ಬಗ್ಗೆ ಪರಿಸರ ಆಸಕ್ತರಿಗೆ ಶಿಕ್ಷಣವೂ ಆಗಿದೆ. ಹಲವರಿಗೆ ಜೀವನೋಪಾಯವೂ ಆಗಿದೆ. ಈ ಹಿನ್ನೆಲೆಯಲ್ಲಿ ಅ.28ರಿಂದಲೇ ಹಾಲಿ ಇರುವ ಸಫಾರಿಯ ಟ್ರಿಪ್​ಗಳ ಪೈಕಿ 1 ಟ್ರಿಪ್ ಅನ್ನು ಕಡಿತಗೊಳಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಈ ಮೂಲಕ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

8 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

8 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

9 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

9 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

9 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

9 hours ago