ಚಾಮರಾಜನಗರ: ಕ್ಷುಲ್ಲಕ ಕಾರಣಕ್ಕೆ 12 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಲೊಕ್ಕನಹಳ್ಳಿಯಲ್ಲಿ ನಡೆದಿದೆ.
ಪ್ರಜ್ವಲ್ ಎಂಬುವವರೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ.

ಲೊಕ್ಕನಹಳ್ಳಿ ಗ್ರಾಮದ ನಿವಾಸಿಯಾಗಿರುವ ಶೀಲಾ ಎಂಬುವವರ ಪುತ್ರ ಪ್ರಜ್ವಲ್, ಸಂಬಂಧಿಕರ ಮಗುವಿನ ಜೊತೆ ಆಟವಾಡುತ್ತಿದ್ದ. ಈ ವೇಳೆ ಆ ಮಗು ಕೆಳಗೆ ಬಿದ್ದು ಕಾಲಿಗೆ ಪೆಟ್ಟು ಮಾಡಿಕೊಂಡಿದೆ.
ಇದನ್ನೂ ಓದಿ:- ಮಂಡ್ಯ| ನಾಲೆಗೆ ಬಿದ್ದ ಕಾರು: ಒಂದೇ ಕುಟುಂಬದ ಮೂವರು ಸಾವು
ಕೂಡಲೇ ಮಗುವನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಿಂದ ಮನನೊಂದ ಬಾಲಕ ಪ್ರಜ್ವಲ್ ಮಗುವಿಗೆ ಏನಾದರೂ ಆದರೆ ನನಗೆ ಬೈಯುತ್ತಾರೆ ಎಂದು ಹೆದರಿ ನೇಣಿಗೆ ಶರಣಾಗಿದ್ದಾನೆ.
ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ಹನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





