Mysore
23
mist

Social Media

ಬುಧವಾರ, 25 ಡಿಸೆಂಬರ್ 2024
Light
Dark

ಮಲೆ ಮಹದೇಶ್ವರ ಬೆಟ್ಟದಲ್ಲಿ 29 ದಿನಗಳಲ್ಲಿ 2.16 ಕೋಟಿ ರೂ. ಸಂಗ್ರಹ

ಹನೂರು : ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 29 ದಿನಗಳ ಅವಧಿಯಲ್ಲಿ 2.16 ಕೋಟಿ ರೂ. ಸಂಗ್ರಹವಾಗಿದೆ.

ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು.

ಎಣಿಕೆ ಕಾರ್ಯವು ಸಂಜೆ 7:40ರ ಗಂಟೆಯವರೆಗೂ ನಡೆಯಿತು.

ರಾಜ್ಯ ಸರ್ಕಾರದ  ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭೇಟಿ ನೀಡಿದ್ದಾರೆ. ಅಮಾವಾಸ್ಯೆ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 2,16,34,614 ರೂ. ಸಂಗ್ರಹವಾಗಿದೆ. ಚಿನ್ನ  78 ಗ್ರಾಂ ಮತ್ತು ಬೆಳ್ಳಿ 2 ಕೆಜಿ 350 ಗ್ರಾಂ ಸಂಗ್ರಹವಾಗಿದೆ.

ಇದಲ್ಲದೆ ಯು ಎಸ್ ಎ, ನೇಪಾಳ , ಮಲೇಶಿಯಾ ದೇಶದ  ವಿದೇಶಿ ನೋಟುಗಳು,  ಇದಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 12 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ

ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕ ಅಧೀಕ್ಷಕ ನಾಗೇಶ್,  ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ