ಹನೂರು : ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 29 ದಿನಗಳ ಅವಧಿಯಲ್ಲಿ 2.16 ಕೋಟಿ ರೂ. ಸಂಗ್ರಹವಾಗಿದೆ.
ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು.
ಎಣಿಕೆ ಕಾರ್ಯವು ಸಂಜೆ 7:40ರ ಗಂಟೆಯವರೆಗೂ ನಡೆಯಿತು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭೇಟಿ ನೀಡಿದ್ದಾರೆ. ಅಮಾವಾಸ್ಯೆ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 2,16,34,614 ರೂ. ಸಂಗ್ರಹವಾಗಿದೆ. ಚಿನ್ನ 78 ಗ್ರಾಂ ಮತ್ತು ಬೆಳ್ಳಿ 2 ಕೆಜಿ 350 ಗ್ರಾಂ ಸಂಗ್ರಹವಾಗಿದೆ.
ಇದಲ್ಲದೆ ಯು ಎಸ್ ಎ, ನೇಪಾಳ , ಮಲೇಶಿಯಾ ದೇಶದ ವಿದೇಶಿ ನೋಟುಗಳು, ಇದಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 12 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ
ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕ ಅಧೀಕ್ಷಕ ನಾಗೇಶ್, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.
ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ…
ಹೊಸದಿಲ್ಲಿ : ಒಲಿಂಪಿಕ್ ಕನಸನ್ನು ಬೆನ್ನಟ್ಟಲು 18 ತಿಂಗಳ ವಿರಾಮದ ನಂತರ ಮತ್ತೆ ವಾಪಸ್ಸಾಗುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ಘೋಷಿಸಿದ್ದಾರೆ.…
ಬೆಳಗಾವಿ : ಡಿನ್ನರ್ ಮೀಟಿಂಗ್ ಗಳ ಮೂಲಕ ತಾವು ಶಕ್ತಿ ಪ್ರದರ್ಶನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ…
ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು…
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…