2.36 crore collected in last 30 days from male mahadeshwara betta
ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 2.36 ಕೋಟಿ ರೂ. ಸಂಗ್ರಹವಾಗಿದೆ.
ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 7 ಗಂಟೆಯವರೆಗೂ ನಡೆಯಿತು.
ಸರ್ಕಾರಿ ರಜಾ ದಿನ, ಅಮಾವಾಸ್ಯೆ, ಜಾತ್ರಾ ಮಹೋತ್ಸವ ಸೇರಿದಂತೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,36,73,185 ನಗದು 70 ಗ್ರಾಂ ಚಿನ್ನ ಹಾಗೂ 1 ಕೆಜಿ 712 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
ಇದಲ್ಲದೇ ಹುಂಡಿಯಲ್ಲಿ 20 ವಿದೇಶಿ ನೋಟುಗಳು ಸಂಗ್ರಹವಾಗಿದ್ದು, ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 14 ನೋಟುಗಳನ್ನು ಸಹ ಭಕ್ತರು ಹುಂಡಿಯಲ್ಲಿ ಹಾಕಿದ್ದಾರೆ.
ಎಣಿಕೆ ಕಾರ್ಯದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ನಾಮ ನಿರ್ದೇಶಿತ ಸದಸ್ಯರುಗಳಾದ ಮರಿಸ್ವಾಮಿ, ಭಾಗ್ಯಮ್ಮ, ಕುಪ್ಯಾ ಲೆಕ್ಕಾ ಪತ್ರ ಸಲಹೆಗಾರ ಮಹದೇವ್, ಲೆಕ್ಕ ಅಧೀಕ್ಷಕರಾದ ಗುರುಮಲ್ಲಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…